ಸಂತೋಷ್ ಹೆಗ್ಡೆ 
ಪ್ರಧಾನ ಸುದ್ದಿ

ಸರ್ಕಾರ ನ್ಯಾ.ಭಾಸ್ಕರ್ ರಾವ್ ಹಾಗೂ ಪುತ್ರನ ರಕ್ಷಣೆಗೆ ನಿಂತಿದೆ: ಸಂತೋಷ್ ಹೆಗ್ಡೆ

ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚನೆ ಮಾಡುವ...

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚನೆ ಮಾಡುವ ಮೂಲಕ ಆರೋಪಿಗಳ ಬೆಂಬಲಕ್ಕೆ ನಿಂತಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಶನಿವಾರ ಆರೋಪಿಸಿದ್ದಾರೆ.

ಇಂದು ಶಾಸಕರ ಭವನದಲ್ಲಿ ಭೂ ಕಬಳಿಕೆ ವಿರೋಧಿ ಹೋರಾಟ ಸಮತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಟಿಗೆ ಆರೋಪಿಗಳನ್ನು ಬಂಧಿಸುವ ಅಧಿಕಾರ ಇಲ್ಲ. ಎಸ್‌ಐಟಿ ಹಲ್ಲಿಲ್ಲದ ಸಂಸ್ಥೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಹಾಗೂ ಒಂದಂಕಿ ಲಾಟರಿ ಹಗರಣವನ್ನು ಸಿಬಿಐ ವಹಿಸುತ್ತದೆ. ಆದರೆ ಸ್ವತಃ ಲೋಕಾಯುಕ್ತರ ಪುತ್ರರೇ ಹಗರಣದಲ್ಲಿ ಭಾಗಿಯಾಗಿರುವ ಈ ಪ್ರಕರಣವನ್ನು ಏಕೆ ಸಿಬಿಐಗೆ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಇದೇ ವೇಳೆ, ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದ ಮಾಜಿ ಲೋಕಾಯುಕ್ತರು, ರಾಜ್ಯದ ಜನರ ಸಹ ಲೋಕಾಯುಕ್ತರ ರಾಜಿನಾಮೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಅವರು ರಾಜಿನಾಮೆ ಕೊಡದಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT