ಆಂಧ್ರ ಕಾಲ್ತುಳಿತ: ಸಾವಿನಿಂದ ಅಪಾರ ನೋವಾಗಿದೆ ಎಂದ ಪ್ರಧಾನಿ
ಆಂಧ್ರಪ್ರದೇಶದ ರಾಜಮಂಡ್ರಿಯ ಗೋದಾವರಿ ಪುಷ್ಕರ ಸ್ನಾನದ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮೃತಗೊಂಡವರ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ
ಹೈದರಾಬಾದ್: ಆಂಧ್ರಪ್ರದೇಶದ ರಾಜಮಂಡ್ರಿಯ ಗೋದಾವರಿ ಪುಷ್ಕರ ಸ್ನಾನದ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮೃತಗೊಂಡವರ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಾವುಗಳಿಂದ ಅಪಾರ ನೋವಾಗಿದೆ ಎಂದು ತಿಳಿಸಿದ್ದಾರೆ.
"ರಾಜಮಂಡ್ರಿಯಲ್ಲಾದ ಕಾಲ್ತುಳಿತಕೆ ಸಿಕ್ಕಿ ಜೀವ ಕಳೆದುಕೊಂಡವರ ಬಗ್ಗೆ ಅತೀವ ನೋವಾಗುತ್ತಿದೆ. ಮೃತಪಟ್ಟ ಜನರ ಕುಟುಂಬಗಳಿಗೆ ನನ್ನ ಸಂತಾಪ ಮತ್ತು ಗಾಯಗೊಂಡವರಿಗಾಗಿ ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.