ಬೆಂಗಳೂರು: ಕಾನೂನು ಬಾಹಿರವಾಗಿ ಅದಿರು ರಫ್ತು ಮಾಡಿದ ಆರೋಪದ ಮೇಲೆ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ರನ್ನು ಸಿಬಿಐ ಬಂಧಿಸಿದೆ.
2010ರಲ್ಲಿ ಅನಿಲ್ ಲಾಡ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಗೆ 15 ಸಾವಿರ ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ತನಿಖಾಧಿಕಾರಿಗಳು ಬಂಧಿಸಿದ್ದಾರೆ.
ಅನಿಲ್ ಲಾಡ್ ಬಂಧನಕ್ಕೂ ಮುನ್ನ ಅದಿರು ರಫ್ತು ಮಾಡಿರುವ ಸಂಬಂಧ ದಾಖಲೆಗಳನ್ನು ಒದಗಿಸುವಂತೆ ಸೂಚಿಸಲಾಗಿತ್ತು. ಆದರೆ 15 ಮೆಟ್ರಿಕ್ ಟನ್ ಕಬ್ಬಿಣದ ಅದಿರಿಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನೀಡದ್ದರಿಂದ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧನಕ್ಕೊಳಗಾಗಿರುವ ಅನಿಲ್ ಲಾಡ್ ರನ್ನು ಸಿಬಿಐ ಅಧಿಕಾರಿಗಳು ನಾಳೆ ಬೆಳಗ್ಗೆ 11 ಗಂಟೆಗೆ ಸಿಬಿಐ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.