ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಬಳ್ಳಾರಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರನ್ನು ಸಿಬಿಐ ವಿಶೇಷ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಸಿಬಿಐ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಪೊಲೀಸರು ಇಂದು ಅನಿಲ್ ಲಾಡ್ ಅವರನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.
ವಿಚಾರಣೆ ನಡೆಸಿದೆ ಕೋರ್ಟ್, ಆಕ್ಷೇಪಣೆ ಸಲ್ಲಿಸಲು ಜುಲೈ 22ರವರೆಗೆ ಅವಕಾಶ ನೀಡಿ, ಲಾಡ್ ಅವರಿಗೆ ಆಗಸ್ಟ್ 3ರವರೆಗೆ ನ್ಯಾಯಂಗ ಬಂಧನ ವಿಧಿಸಿದೆ.
2010ರಲ್ಲಿ ಅನಿಲ್ ಲಾಡ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಗೆ 15 ಸಾವಿರ ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ತನಿಖಾಧಿಕಾರಿಗಳು ಬಂಧಿಸಿದ್ದರು.