ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಲೋಕಾ ಭ್ರಷ್ಟಾಚಾರ: ಎಸ್‌ಐಟಿಯಿಂದ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಗುರುವಾರ...

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಗುರುವಾರ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ.

ಎಡಿಜಿಪಿ ಕಮಲ್ ಪಂಥ್ ನೇತೃತ್ವದ ಎಸ್‌ಐಟಿ ಇಂದು ಹೆಚ್ಚುವರಿ ಗೃಹ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ವಿಚಾರಣೆ ನಡೆಸದೇ ಎಸ್‌ಐಟಿ ಮಧ್ಯಂತರ ವರದಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇನ್ನು ಪ್ರಕರಣ ಸಂಬಂಧ ನಿನ್ನೆಯಷ್ಟೇ ವಿಚಾರಣೆಗೆ ಹಾಜರಾಗುವಂತೆ ಅಶ್ವಿನ್ ರಾವ್‌ಗೆ ನೋಟಿಸ್ ಜಾರಿ ಮಾಡಿದ್ದ ಎಸ್‌ಐಟಿ, ಇಂದು ಅಶ್ವಿನ್ ರಾವ್ ಬಂಧನಕ್ಕಾಗಿ ಹೈದರಾಬಾದ್ ಗೆ ತೆರಳಿದೆ ಎನ್ನಲಾಗುತ್ತಿದೆ.

ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಅವರು ನೀಡಿದ ದೂರು ಆಧರಿಸಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಕೃಷ್ಣಮೂರ್ತಿಯವರನ್ನು ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡ ವ್ಯಕ್ತಿ ಯಾರು ಎನ್ನುವ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ