ರಾಧಾ ಮೋಹನ್ ಸಿಂಗ್ 
ಪ್ರಧಾನ ಸುದ್ದಿ

ರೈತರ ಆತ್ಮಹತ್ಯೆಗೆ ಪ್ರೇಮ ವೈಫಲ್ಯ, ನಪುಂಸಕತ್ವ ಕಾರಣ: ಕೇಂದ್ರ ಕೃಷಿ ಸಚಿವ

ದೇಶದಲ್ಲಿ ಪ್ರಸಕ್ತ ವರ್ಷ 1,400ಕ್ಕಿಂತಲೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಪ್ರೇಮ ವೈಫಲ್ಯ ಅಥವಾ ನಪುಂಸಕತ್ವವೇ ಕಾರಣ...

ನವದೆಹಲಿ: ದೇಶದಲ್ಲಿ ಪ್ರಸಕ್ತ ವರ್ಷ 1,400ಕ್ಕಿಂತಲೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಪ್ರೇಮ ವೈಫಲ್ಯ ಅಥವಾ ನಪುಂಸಕತ್ವವೇ ಕಾರಣ ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಹೇಳಿದ್ದಾರೆ.

ಶುಕ್ರವಾರ ರಾಜ್ಯಸಭೆಯಲ್ಲಿ ರೈತರ ಆತ್ಮಹತ್ಯೆಗೆ ಕಾರಣವೇನು ಎಂಬುದರ ಬಗ್ಗೆ ಚರ್ಚೆಯಾಗುತ್ತಿದ್ದ ವೇಳೆ ರಾಧಾ ಮೋಹನ್ ಸಿಂಗ್, ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ಪ್ರಕಾರ ರೈತರ ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆಗಳು, ರೋಗ, ಮಾದಕವಸ್ತು, ವರದಕ್ಷಿಣೆ , ಪ್ರೇಮ ವೈಫಲ್ಯ ಮತ್ತು ನಪುಂಸಕತ್ವ ಕಾರಣ ಎಂದು ಹೇಳಲಾಗಿದೆ ಎಂದು ಉತ್ತರಿಸಿದ್ದಾರೆ.

ಸಚಿವರ ಈ ಹೇಳಿಕೆಗೆ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸಿವೆ. ಅದೇ ವೇಳೆ ಸಚಿವರ ಈ ರೀತಿಯ ಹೇಳಿಕೆ ವಿರುದ್ಧ ತಾವು ನೋಟಿಸ್ ಸಲ್ಲಿಸುವುದಾಗಿ ಜನತಾದಳ (ಯುನೈಟೆಡ್) ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.

ಕೇಂದ್ರ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ  ಕಾಂಗ್ರೆಸ್ ವಕ್ತಾರ, ನಟ ರಾಜ್ ಬಬ್ಬರ್,  ರೈತರ ಆತ್ಮಹತ್ಯೆಯ ಬಗ್ಗೆ ಬಿಜೆಪಿ ಮಾತ್ರವೇ ಈ ರೀತಿಯ ಬೇಜವಾಬ್ದಾರಿಯ ಹೇಳಿಕೆ ನೀಡಬಲ್ಲುದು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!