ಮುಖ್ಯಮಂತ್ರಿ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಸದ್ಯ ಸಾಲ ಮನ್ನಾ ಇಲ್ಲ: ಸಿಎಂ

ಈ ಹಿಂದಿನ ಸರ್ಕಾರ ರೈತರ ಸಾಲ ಮನ್ನಾಮಾಡಿತ್ತು. ಅದರ ಬಾಕಿ ರು.2500 ಕೋಟಿಯನ್ನು ನಾವು ತೀರಿಸಿದ್ದೇವೆ. ಹೀಗಾಗಿ ಸಾಲ ಮನ್ನಾ ಮಾಡುವುದು ಕಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹಿಂದಿನ ಸರ್ಕಾರ ಮಾಡಿದ ಮನ್ನಾ ರು.2500 ಕೋಟಿ ಬಾಕಿ ತೀರಿಸಿದ್ದೇವೆ

ಮಂಡ್ಯ:
  ಈ ಹಿಂದಿನ ಸರ್ಕಾರ ರೈತರ ಸಾಲ ಮನ್ನಾಮಾಡಿತ್ತು. ಅದರ ಬಾಕಿ ರು.2500 ಕೋಟಿಯನ್ನು  ನಾವು ತೀರಿಸಿದ್ದೇವೆ. ಹೀಗಾಗಿ ಸಾಲ ಮನ್ನಾ ಮಾಡುವುದು ಕಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯಕ್ಕಂತೂ ಸಾಲ ಮನ್ನಾ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ. ರೈತರ ಸರಣಿ ಸಾವಿಗೆ ಸಾಲವೊಂದೇ ಕಾರಣವಲ್ಲ ಎಂಬ ಸಂಗತಿ ಸರ್ಕಾರಕ್ಕೆ ಮನವರಿಕೆಯಾಗಿದೆ. ಹೀಗಾಗಿ ಸಾಲಕ್ಕೆ ಸ್ಪಷ್ಟ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ಸಮಗ್ರ ಅಧ್ಯಯನ ಮಾಡಿ ವರದಿ ನೀಡಲಿದೆ. ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ರೈತರು ನಪುಂಸಕರು ಹಾಗೂ ಕುಡುಕರು ಎಂಬುದಾಗಿ ಹಗುರವಾಗಿ ಮಾತನಾಡಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದರು.

ರಾಹುಲ್ ಭೇಟಿ:

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯಕ್ಕೆ 2 ದಿನ ಭೇಟಿ ನೀಡಲಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಭೇಟಿ ಸಾಂತ್ವನ ಹೇಳುವ ಕಾರ್ಯಕ್ರಮದ ದಿನಾಂಕ ಮತ್ತು ಸ್ಥಳವನ್ನು ನಿಗದಿ ಮಾಡಲು ನನಗೆ ಸೂಚಿಸಿದ್ದಾರೆ. ಚರ್ಚೆ ಮಾಡಿ ಅವರಿಗೆ ಮಾಹಿತಿ ನೀಡಲಾಗುವುದು ಎಂದರು.

ಸಂಪುಟ ಪುನಾರಚನೆ:
ಈಗ ಬಿಬಿಎಂಪಿ ಚುನಾವಣೆ ಇದೆ. ಮುಗಿದ ಬಳಿಕವೇ ಸಂಪುಟಪುನಾರಚನೆಗೆ ಚಾಲನೆ ನೀಡುತ್ತೇವೆ ಎಂದರು.

ರೈತರೇ, ಕೈ ಮುಗಿಯುವೆ ಬೇಡ ಆತ್ಮಹತ್ಯೆ:
ರೈತರ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಆತ್ಮಹತ್ಯೆಗೂ ಮುನ್ನ ಕ್ಷಣ ಕಾಲ ಕುಟುಂಬದ ಭವಿಷ್ಯದ ಬಗ್ಗೆ ಆಲೋಚಿಸುವುದು ಒಳ್ಳೆಯದು. ಆಗ ಯಾರೂ ಇಂಥ ದುಸ್ಸಾಹಸಕ್ಕೆ ಮುಂದಾಗುವುದಿಲ್ಲ. ಕೈ ಮುಗಿದು ಪ್ರಾರ್ಥಿಸುತ್ತೇನೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಮುಂದುವರಿದ ಸಚಿವ ಅಂಬರೀಷ್ ಮುನಿಸು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಅವರ ಮುನಿಸು ಮುಂದು ವರೆದಿದೆ. ಶನಿವಾರ ಪಿಇಎಸ್ ಕಾಲೇಜಿನ ಸುವರ್ಣ ಮಹೋತ್ಸವ ಹಾಗೂ ಕೆ.ವಿ.ಶಂಕರಗೌಡ ಶತಮಾನೋತ್ಸವ ಸಂಭ್ರಮ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಿಎಂ ಜತೆ ಅಂಬರೀಷ್ ವೇದಿಕೆ ಹಂಚಿಕೊಳ್ಳಲು ಹಿಂದೇಟು ಹಾಕಿದ್ದು ಕಂಡು ಬಂತು. ಸಿಎಂ ಆಗಮನಕ್ಕೆ ಮೊದಲೇ ಕಾರ್ಯಕ್ರಮಕ್ಕೆ ಬಂದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣಕ್ಕೆ ನಿಂತಾಗ ವೇದಿಕೆಯಿಂದ ಕೆಳಗಿಳಿದು ಹೊರಟು ಹೋದರು. ಬಳಿಕ ನಡೆದ ಕೆ.ವಿ. ಶಂಕರಗೌಡ ಶತಮಾನೋತ್ಸವ ಸಮಾರಂಭಕ್ಕೆ ಸಚಿವ ಅಂಬರೀಷ್ ಹಾಗೂ ಅವರ ಬೆಂಬಲಿಗರು ಭಾಗವಹಿಸಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ