ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಾಂಗ್ರೆಸ್ ಶಾಸಕ ಅನಿಲ್ ಲಾಡ್‌ಗೆ ಷರತ್ತುಬದ್ಧ ಜಾಮೀನು

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಬಳ್ಳಾರಿ ಕಾಂಗ್ರೆಸ್ ಶಾಸಕ ಅನಿಲ್ ಅವರಿಗೆ ಸೋಮವಾರ ಸಿಬಿಐ ವಿಶೇಷ ಕೋರ್ಟ್ ಷರತ್ತುಬದ್ಧ...

ಅನಿಲ್ ಲಾಡ್
Lingaraj Badiger
Updated On : 27 Jul 2015, 4:29 am

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಬಳ್ಳಾರಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರಿಗೆ ಸೋಮವಾರ ಸಿಬಿಐ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಲಾಡ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರ ವೈಯಕ್ತಿಕ ಶ್ಯೂರಿಟಿ ಹಾಗೂ ತಲಾ 10 ಲಕ್ಷ ರುಪಾಯಿ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ.

ತನಿಖೆಗೆ ಸಹಕರಿಸುವಂತೆ ಹಾಗೂ ಪ್ರತಿ ಶನಿವಾರ ಸಿಬಿಐ ಕಚೇರಿಗೆ ಆಗಮಿಸಿ ಸಹಿ ಹಾಕುವಂತೆ ಅನಿಲ್ ಲಾಡ್ ಅವರಿಗೆ ಕೋರ್ಟ್ ಸೂಚಿಸಿದೆ.

2010ರಲ್ಲಿ ಅನಿಲ್ ಲಾಡ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಗೆ 15 ಸಾವಿರ ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ತನಿಖಾಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement