ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದೆಹಲಿಯಲ್ಲಿ ಇಬ್ಬರು ದರೋಡೆಕೋರರ ಬಂಧನ

ಹಲವಾರು ಕ್ರಿಮಿನಲ್ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಗುರುವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಹಲವಾರು ಕ್ರಿಮಿನಲ್ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಗುರುವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಅಜಿತ್ ಅಲಿಯಾಸ್ ಪಿಂಟೊ (೨೫) ಮತ್ತು ರಾಹುಲ್ (೨೨) ಎಂದು ಗುರುತಿಸಲಾಗಿದ್ದು ಇಬ್ಬರೂ ದೆಹಲಿಯ ಸುಲ್ತಾನಪುರಿಯವರು ಎಂದು ತಿಳಿದುಬಂದಿದೆ. ಜುಲೈ ೨೮ರಂದು ಇವರನ್ನು ಕ್ರೈಮ್ ಬ್ರ್ಯಾಂಚ್ ವಶಕ್ಕೆ ನೀಡಲಾಗಿದೆ.

ಬಂಧಿತರಿಬ್ಬರು ಸುಲ್ತಾನಪುರಿ ಪ್ರದೇಶದಲ್ಲಿ ಕದ್ದ ಮೊಬೈಲ್ ಫೋನುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಕ್ರೈಮ್ ಬ್ರ್ಯಾಂಚ್ ನ ಜಂಟಿ ಪೊಲೀಸ್ ಕಮಿಷನರ್ ರವೀಂದ್ರ ಯಾದವ್ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮೀರತ್ ನ ಇನ್ನು ಮೂವರು ಸಹಚರಿಗಳ ಜೊತೆ ಇವರಿಬ್ಬರು ಸೇರಿ ರಾತ್ರಿ ಸಮಯದಲ್ಲಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ದರೋಡೆ ಮಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾರೆ.

"ದೆಹಲಿಯ ವಿಭಿನ್ನ ಪ್ರದೇಶಗಳಲ್ಲಿ ೮ ದರೋಡೆಗಗಳಲ್ಲಿ ಭಾಗಿಯಾಗಿರುವುದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel