ಕನ್ನಡಿಗರಾದ ಲಕ್ಷ್ಮಿಕಾಂತ್, ವಿಜಯ್ ಕುಮಾರ್ 
ಪ್ರಧಾನ ಸುದ್ದಿ

ಇಸಿಸ್‌ನಿಂದ ಇಬ್ಬರು ಕನ್ನಡಿಗರು ಸೇರಿದಂತೆ ನಾಲ್ವರು ಭಾರತೀಯರ ಅಪಹರಣ

ಲಿಬಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿರುವ ನಾಲ್ವರು ಭಾರತೀಯರ ಪೈಕಿ ಇಬ್ಬರು ಕನ್ನಡಿಗರು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ...

ಲಿಬಿಯಾ: ಲಿಬಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿರುವ ನಾಲ್ವರು ಭಾರತೀಯರ ಪೈಕಿ ಇಬ್ಬರು ಕನ್ನಡಿಗರು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ವಿಜಯ್ ಕುಮಾರ್ ಬೆಂಗಳೂರು ನಿವಾಸಿ ಹಾಗೂ ಲಕ್ಷ್ಮಿಕಾಂತ್ ರಾಯಚೂರಿನ ನಿವಾಸಿಯಾಗಿದ್ದಾರೆ. ಮತ್ತಿಬ್ಬರು ಹೈದರಬಾದಿನವರು ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಮಾಹಿತಿ ನೀಡಿದ್ದಾರೆ.

ಇರಾಕ್ ಮತ್ತು ಸಿರಿಯಾದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುವ ಮೂಲಕ ಅಟ್ಟಹಾಸ ಮೆರೆಯುತ್ತಿರುವ ಇಸಿಸ್ ಉಗ್ರರು ಭಾರತದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿಯ ಬೆನ್ನಲ್ಲೇ ಲಿಬಿಯಾದಲ್ಲಿ ಇಸಿಸ್ ಉಗ್ರರು ನಾಲ್ವರು ಭಾರತೀಯರನ್ನು ಅಪಹರಿಸಿದ್ದರು.

ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ನಾಲ್ವರು ಭಾರತೀಯರನ್ನು ನಿನ್ನೆ ಲಿಬಿಯಾದ ಟ್ರೈಪೋಲೀಯ ಸಿರ್ತೆ ನಗರದಿಂದ ಇಸಿಸ್ ಭಯೋತ್ಪಾದಕರು ಅಪಹರಿಸಿದ್ದರು.

ಅಪಹರಣದ ಬಗ್ಗೆ ಲಿಬಿಯಾ ದೇಶದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಭಾರತೀಯರ ರಕ್ಷಣೆ ಕುರಿತಂತೆ ಲಿಬಿಯಾ ದೇಶದೊಡನೆ ಭಾರತ ಚರ್ಚಿಸುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT