ಟಿ.ಬಿ.ಜಯಚಂದ್ರ 
ಪ್ರಧಾನ ಸುದ್ದಿ

ವಿಧಾನ ಪರಿಷತ್‌ನಲ್ಲೂ ಲೋಕಾಯುಕ್ತ ತಿದ್ದುಪಡಿ ವಿಧೇಯಕ ಅಂಗೀಕಾರ

ಹಲವು ದಿನಗಳ ಚರ್ಚೆಯ ಬಳಿಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಲೋಕಾಯುಕ್ತರ ನೇಮಕ ಮತ್ತು ಪದಚ್ಯುತಿ ತಿದ್ದುಪಡಿ ವಿಧೇಯಕ ಶುಕ್ರವಾರ ವಿಧಾನ ಪರಿಷತ್ ನಲ್ಲೂ ಅಂಗೀಕಾರವಾಗಿದೆ.

ಬೆಂಗಳೂರು: ಹಲವು ದಿನಗಳ ಚರ್ಚೆಯ ಬಳಿಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಲೋಕಾಯುಕ್ತರ ನೇಮಕ ಮತ್ತು ಪದಚ್ಯುತಿ ತಿದ್ದುಪಡಿ ವಿಧೇಯಕ ಶುಕ್ರವಾರ ವಿಧಾನ ಪರಿಷತ್ ನಲ್ಲೂ ಅಂಗೀಕಾರವಾಗಿದೆ.

ಇಂದು ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್ ನಲ್ಲಿ ಮಂಡಿಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಸದ್ಯ ಲೋಕಾಯುಕ್ತರ ಹಾಗೂ ಉಪ ಲೋಕಾಯುಕ್ತರ ನೇಮಕ ಮತ್ತು ಪದಚ್ಯುತಿ ನಿರ್ಣಯಕ್ಕೆ ಮಾತ್ರ ತಿದ್ದುಪಡಿ ತರಲಾಗಿದ್ದು, ಬಿಬಿಎಂಪಿ ಚುನಾವಣೆ ಬಳಿಕ ಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ ಕರೆದು ಲೋಕಾಯುಕ್ತ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದರು.

ಮೂರನೇ ಎರಡರಷ್ಟು ಸದಸ್ಯರ ಬಹುಮತದೊಂದಿಗೆ (150 ಸದಸ್ಯರ ಸಮ್ಮತಿ, ವಿಧಾನ ಪರಿಷತ್‍ನ 50 ) ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ಪದಚ್ಯುತಿ ನಿರ್ಣಯ ತೆಗೆದುಕೊಳ್ಳಬಹುದು ಎಂಬ ಪರಿಷ್ಕರಣೆಯೊಂದಿಗೆ ನಿನ್ನೆ ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರಕಿತ್ತು.

ನಿರ್ಣಯ ಮಂಡನೆಯಾದರೆ ಲೋಕಾಯುಕ್ತರ ರೆಕ್ಕೆಪುಕ್ಕ ಕಟ್ :
ಈ ತಿದ್ದುಪಡಿ ವಿಧೇಯಕದ ಪ್ರಕಾರ ಒಮ್ಮೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತ ಪದಚ್ಯುತಿ ನಿರ್ಣಯ ವಿಧಾನಮಂಡಲದಲ್ಲಿ ಮಂಡನೆಯಾದ ತಕ್ಷಣ ಅವರ ಅಧಿಕಾರ ಮೊಟಕುಗೊಳ್ಳುತ್ತದೆ. ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರು ಅಧಿಕಾರ ನಡೆಸುವುದಕ್ಕೆ ಸಾಧ್ಯವಿಲ್ಲ. ವಿಧಾನ ಮಂಡಲದಲ್ಲಿ ಮಂಡನೆಯಾದ ನಿರ್ಣಯ ಇತ್ಯರ್ಥಗೊಳ್ಳುವವರೆಗೂ ಅವರ ಎಲ್ಲ ಹಕ್ಕು ಮತ್ತು ಕರ್ತವ್ಯಗಳು ತಡೆಹಿಡಿಯಲ್ಪಡುತ್ತದೆ. ಅಂದರೆ ಲೋಕಾಯುಕ್ತ ವೈ.ಭಾಸ್ಕರ ರಾವ್ ಪದಚ್ಯುತಿ ನಿರ್ಣಯ ಮಂಡನೆಗೆ ಸರ್ಕಾರ ತಕ್ಷಣ ಇನ್ನೊಂದು ಅಧಿವೇಶನ ಕರೆದು ನಿರ್ಣಯ ಮಂಡನೆಯಾದಾಗ ಮಾತ್ರ ಇದು ಸಾಧ್ಯವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video