ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಲೋಕಾ ಭ್ರಷ್ಟಾಚಾರ: ಶ್ರೀನಿವಾಸ್‌ಗೌಡ, ಶಂಕರೇಗೌಡಗೆ ನ್ಯಾಯಾಂಗ ಬಂಧನ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಶ್ರೀನಿವಾಸಗೌಡ, ಶಂಕರೇಗೌಡ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್....

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಶ್ರೀನಿವಾಸಗೌಡ, ಶಂಕರೇಗೌಡ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಇದೇ ವೇಳೆ ಬಂಧಿತ ಮತ್ತೊಬ್ಬ ಆರೋಪಿಯನ್ನು ಮತ್ತೆ ಎಸ್‌ಐಟಿ ವಶಕ್ಕೆ ನೀಡಿದೆ.

ಕಳೆದ ಮಂಗಳವಾರ ಲೋಕಾಯುಕ್ತ ಕೋರ್ಟ್, ಈ ಮೂವರು ಆರೋಪಿಗಳನ್ನು ಜುಲೈ 31ರವರೆಗೆ ಎಸ್‌ಐಟಿ ವಶಕ್ಕೆ ನೀಡಿತ್ತು.

ಬಂಧನ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಎಸ್‌ಐಟಿ ಅಧಿಕಾರಿಗಳು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿ, ಲೋಕಾಯುಕ್ತ ಲಂಚ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ ಅಶೋಕ್ ಕುಮಾರ್‌ನನ್ನು ಹೆಚ್ಚಿನ ವಿಚಾರಣೆಗೆಗಾಗಿ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್, ಅಶೋಕ್ ಕುಮಾರ್‌ನನ್ನು ಮತ್ತೆ ಎಸ್‌ಐಟಿ ವಶಕ್ಕೆ ನೀಡಿ, ಶ್ರೀನಿವಾಸ್‌ಗೌಡ ಹಾಗೂ ಶಂಕರೇಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪಿಗಳ ಪೈಕಿ ಅಶೋಕ್ ಕುಮಾರ್ ಎಂಬಾತನೇ ಪ್ರಮುಖ ಆರೋಪಿಯಾಗಿದ್ದು ಇತರ ಆರೋಪಿಗಳೊಂದಿಗೆ ಸೇರಿ ಒಳಸಂಚು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ