ಜು. 1ರಿಂದ ಬೆಳಗಾವಿಯಲ್ಲಿ ವಿಶೇಷ ಅಧಿವೇಶನ
ಈ ಬಾರಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಜುಲೈ 1ರಿಂದ 20 ದಿನಗಳ ಕಾಲ ಮಳೆಗಾಲದ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ.
ಬೆಂಗಳೂರು: ಈ ಬಾರಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಜುಲೈ 1ರಿಂದ 20 ದಿನಗಳ ಕಾಲ ಮಳೆಗಾಲದ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ.
ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ಜುಲೈ 1ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಹಾಗೂ ಜುಲೈ 13ರಿಂದ 24ರವರೆಗೆ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ.
ಸರ್ಕಾರ ಕರೆದಿರುವ ಈ ವಿಶೇಷ ಅಧಿವೇಶನಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಹಮತ ವ್ಯಕ್ತಪಡಿಸಿದ್ದು, ರಾಜ್ಯ ಬಜೆಟ್ ಮೇಲಿನ ಬೇಡಿಕೆಗಳ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚೆಯಾಗಲಿದೆ.
ಇದೇ ಮೊದಲ ಬಾರಿಗೆ ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.