ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಇಲ್ಲಿ ಮೂತ್ರ ವಿಸರ್ಜನೆ ಮಾಡಿ ಒಂದು ರುಪಾಯಿ ಪಡೆಯಿರಿ

ಸಾರ್ವಜನಿಕ ಮೂತ್ರಾಲಯಗಳನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಹಾಗು ಸಾರ್ವಜನಿಕ ತೆರೆದ ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆಯನ್ನು ತಡೆಯುವ ನಿಟ್ಟಿನಲ್ಲಿ

ಅಹಮದಾಬಾದ್: ಸಾರ್ವಜನಿಕ ಮೂತ್ರಾಲಯಗಳನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಹಾಗು ಸಾರ್ವಜನಿಕ ತೆರೆದ ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆಯನ್ನು ತಡೆಯುವ ನಿಟ್ಟಿನಲ್ಲಿ ಅಹಮದಾಬಾದ್ ನಗರ ಸಭೆ ಈ ವಿನೂತನ ಯೋಜನೆಯನ್ನು ಹಮ್ಮಿಕೊಂಡಿದೆ. ತಮ್ಮ ಹತ್ತಿರದಲ್ಲಿರುವ ಶೌಚಾಲಯವನ್ನು ಬಳಸಿದವರಿಗೆ ೧ ರುಪಾಯಿ ಸಿಗಲಿದೆ.

ಇದು ೬೭ ಜಾಗಗಳಲ್ಲಿ ಪ್ರಾರಂಭಿಕವಾಗಿ ಜಾರಿಯಾಗಲಿದ್ದು ಯಶಸ್ವಿಯಾದರೆ ನಗರದ ಎಲ್ಲ ಸಾರ್ವಜನಿಕ ಶೌಚಾಲಯಗಳಲ್ಲಿ ಇದನ್ನು ಜಾರಿಗೊಳಿಸಲಾಗುವುದು ಎಂದು ಇಂಗ್ಲಿಶ್ ನಿಯತಕಾಲಿಕ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಾರ್ವಜನಿಕ ತೆರೆದ ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆ ಮಾಡುವವರಿಗೆ ಅತಿ ಹೆಚ್ಚಿನ ದಂಡ ಹಾಕುವುದಕ್ಕೂ ಅಹಮದಾಬಾದ್ ನಗರ ಸಭೆ ಮುಂದಾಗಿದೆ.

ಅಹಮದಾಬಾದ್ ನಗರ ಸಭೆ ಮುಖ್ಯಸ್ಥ ಪ್ರವೀಣ್ ಪಾಟಿಲ್ ಹೇಳುವಂತೆ ನಗರದಲ್ಲಿ ೩೦೦ ಸಾರ್ವಜನಿಕ ಶೌಚಾಲಯಗಳಿವೆ ಎಂದಿದ್ದಾರೆ. "ಸಾರ್ವಜನಿಕ ತೆರೆದ ಪ್ರದೇಶಗಳಲ್ಲಿ ಹೆಚ್ಚು ಮೂತ್ರವಿಸರ್ಜನೆ ಮಾಡುತ್ತಿರುವ ಹತ್ತಿರದ ೬೭ ಪ್ರದೇಶಗಳಲ್ಲಿ ನಾವು ಪ್ರಾರಂಭಿಕವಾಗಿ ನಾವು ಈ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ" ಎಂದು ಹೇಳಿದ್ದರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ