ಕೇಂದ್ರ ಮಾನವ ಸಂಪನ್ಮೂಲ ಖಾತೆಗಳ ಸಚಿವೆ ಸ್ಮೃತಿ ಇರಾನಿ 
ಪ್ರಧಾನ ಸುದ್ದಿ

ನಕಲಿ ಪದವಿ ಆಪಾದನೆ ಎದುರಿಸುತ್ತಿರುವ ಐವರು ಭಾರತೀಯ ರಾಜಕಾರಣಿಗಳು

ಚುನಾವಣಾ ಆಯೋಗಕ್ಕೆ ತಮ್ಮ ಶೈಕ್ಷಣಿಕ ಅರ್ಹತೆಯ ಬಗ್ಗೆ ತಪ್ಪು ಮಾಹಿಸಿ ಒದಗಿಸಿ ಮಾನವ ಸಂಪನ್ಮೂಲ ಖಾತೆಗಳ ಸಚಿವೆ ಸ್ಮೃತಿ ಇರಾನಿ

ಚುನಾವಣಾ ಆಯೋಗಕ್ಕೆ ತಮ್ಮ ಶೈಕ್ಷಣಿಕ ಅರ್ಹತೆಯ ಬಗ್ಗೆ ತಪ್ಪು ಮಾಹಿಸಿ ಒದಗಿಸಿ ಕೇಂದ್ರ  ಮಾನವ ಸಂಪನ್ಮೂಲ ಖಾತೆಗಳ ಸಚಿವೆ ಸ್ಮೃತಿ ಇರಾನಿ ವಿವಾದಕ್ಕೊಳಗಾಗಿದ್ದರು.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡ ತಮ್ಮ ಶೈಕ್ಷಣಿಕ ಅರ್ಹತೆಯ ಬಗ್ಗೆ ತಪ್ಪು ಮಾಹಿತಿ ಒದಗಿಸಿದ್ದರು. ೧೯೯೫ ರಲ್ಲಿ ಇಂಗ್ಲೆಂಡಿನ ಕೇಂಬ್ರಿಜ್ ವಿಶ್ವವಿದ್ಯಾಲಯದಿಂದ ಅಭಿವೃದ್ಧಿ ಆರ್ಥಶಾಸ್ತ್ರದಲ್ಲಿ ಎಂಫಿಲ್ ಪದವಿ ಪಡೆದಿರುವುದಾಗಿ ಅವರು ಹೇಳಿಕೊಂಡಿದ್ದರು. ಆದರೆ ಅವರ ವಿಶ್ವವಿದ್ಯಾಲಯ ಪ್ರಮಾಣಪತ್ರವನ್ನು ಗಮನಿಸಿದಾಗ ರಾಹುಲ್ ಗಾಂಧಿ ಅವರು ಪದವಿಯ ವರ್ಷ ಮತ್ತು ಪದವಿಯ ಹೆಸರಿನ ಬಗ್ಗೆಯೂ ತಪ್ಪು ಮಾಹಿತಿ ಒದಗಿಸಿದ್ದು ತಿಳಿದು ಬರುತ್ತದೆ.


ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಶ್ ಪದವಿ ಪಡೆದಿರುವುದಾಗಿ ನಕಲಿ ಪ್ರಮಾಣಪತ್ರ ಸೃಷ್ಟಿಸಿದ್ದರು. ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಸೋನಿಯಾ ಗಾಂಧಿ ಅಧ್ಯಯನ ಮಾಡಿಲ್ಲ ಎಂದುದಕ್ಕೆ ನನ್ನ ಬಳಿ ವಿಶ್ವವಿದ್ಯಾಲಯ ಬರೆದಿರುವ ಪತ್ರವಿದೆ ಹಾಗು ಅವರು ೫ ತರಗತಿಗಿಂತಲೂ ಹೆಚ್ಚು ಓದಿಲ್ಲ ಎಂದು ಆಪಾದಿಸಿ ವಕೀಲ ಸುಬ್ರಮಣ್ಯಸ್ವಾಮಿ ಸುಪ್ರೀಮ್ ಕೋರ್ಟ್ ಮೊರೆ ಹೋಗಿದ್ದರು.

ಎಎಪಿ ಪಕ್ಷದಲ್ಲಿ ತೋಮರ್ ಅಷ್ಟೇ ಅಲ್ಲ, ಪಕ್ಷದ ಶಾಸಕ ಸುರೇಂದರ್ ಸಿಂಗ್ ಅವರು ಸಿಕ್ಕಿಂ ವಿಶ್ವವಿದ್ಯಾಲಯದಲ್ಲಿ ೨೦೧೨ರಲ್ಲಿ ಬಿ ಎ ಪದವಿ ಪಡೆದಿರುವುದಾಗಿ ಸುಳ್ಳು ಹೇಳಿದ್ದಾರೆ ಎಂದು ಆಪಾದಿಸಿ ದೆಹಲಿ ಹೈಕೋರ್ಟ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಬಿಜೆಪಿ ಶಾಸಕರೊಬ್ಬರು ಸುರೇಂದರ್ ಸಿಂಗ್ ೨೦೧೧ ರಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದರು.

ಬಿಹಾರ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರುವುದಾಗಿ ಹೇಳಿಕೊಂಡಿದ್ದ ಎಎಪಿ ಪಕ್ಷದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ನೆನ್ನೆ ಬಂಧನಕ್ಕೊಳಗಾಗಿದ್ದಾರೆ. ಬಿಹಾರದ ವಿಶ್ವವಿದ್ಯಾಲಯ, ತೋಮರ್ ಅವರು ಯಾವುದೇ ಕಾನೂನು ಪದವಿ ಪಡೆದಿಲ್ಲ ಎಂದು ದೆಹಲಿ ಹೈಕೋರ್ಟ್ ಗೆ ತಿಳಿಸದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!