ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ಎಸ್.ಆರ್. ಹಿರೆಮಠ
ದೇಶದಿಂದ ದೇಣಿಗೆ ಪಡೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನನೊಂದು ಸಮಾಜ ಪರಿವರ್ತನಾ ಸಮೂದಾಯದ ಮುಖ್ಯಸ್ಥ ಎಸ್.ಆರ್...
ಮೈಸೂರು: ವಿದೇಶದಿಂದ ದೇಣಿಗೆ ಪಡೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನನೊಂದು ಸಮಾಜ ಪರಿವರ್ತನಾ ಸಮೂದಾಯದ ಮುಖ್ಯಸ್ಥ ಎಸ್.ಆರ್. ಹಿರೆಮಠ ಅವರು ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ಘಟನೆ ಶನಿವಾರ ನಡೆಯಿತು.
ನಾನು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದೇನೆ. ನಾನು 12ರಿಂದ 14 ವರ್ಷಗಳ ಕಾಲ ವಿದೇಶದಲ್ಲಿದ್ದೆ. ಹೀಗಾಗಿ ಅವರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಹಾಗಂತ ನಾನು ಆ ದುಡ್ಡಿನಲ್ಲಿ ಐಷಾರಾಮಿಯಾದ ಜೀವನ ಮಾಡುತ್ತಿಲ್ಲ ಎಂದರು.
ನಾನು ಈಗಲೂ ಆಟೋ ಹಾಗೂ ಬಸ್ಗಳಲ್ಲಿ ಪ್ರಯಾಣ ಮಾಡುತ್ತೇನೆ. ಸರಳ ಜೀವನ ನಡೆಸುತ್ತಿದ್ದೇನೆ ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.