ಜಿತೇಂದ್ರ ಸಿಂಗ್ ತೋಮರ್ 
ಪ್ರಧಾನ ಸುದ್ದಿ

ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ ತೋಮರ್

ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.

ನವದೆಹಲಿ: ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.

ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಅವರನ್ನು ಇಂದು ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಿಗಿ ಪೊಲೀಸ್ ಭದ್ರತೆಯೊಂದಿಗೆ ತೋಮರ್ ಅವರನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ತೋಮರ್ ಅವರನ್ನು ಮತ್ತೆರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ನಕಲಿ ಪ್ರಮಾಣ ಪತ್ರ ಹೊಂದಿದೆ ಆರೋಪದ ಮೇಲೆ ಕಳೆದ ಮಂಗಳವಾರ ದೆಹಲಿ ಕಾನೂನು ಸಚಿವರಾಗಿದ್ದ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ದೆಹಲಿಯ ಮೆಟ್ರೋಪಾಲಿಟನ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಇನ್ನು ಪ್ರಕರಣದಿಂದ ಆಪ್ ಪಕ್ಷ ತೀವ್ರ ಮುಜುಗರಕ್ಕೀಡಾದ ಹಿನ್ನಲೆಯಲ್ಲಿ ತೋಮರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ತೋಮರ್ ರಾಜಿನಾಮೆ ಪತ್ರವನ್ನು ಅಂಗೀಕರಿಸಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜಿನಾಮೆ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ರವಾನೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT