ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ 
ಪ್ರಧಾನ ಸುದ್ದಿ

ಲಲಿತ್ ಮೋದಿಗೆ ವೀಸಾ ನೆರವು ತಪ್ಪಲ್ಲ: ಸುಷ್ಮಾ ಬೆನ್ನಿಗೆ ನಿಂತ ಬಿಜೆಪಿ

ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಅವರು ವೀಸಾ ಪಡೆಯಲು ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಸುಷ್ಮಾ ಮಾಡಿದ್ದರಲ್ಲಿ ತಪ್ಪೇನಿಲ್ಲ ಎಂದು ಹೇಳಿದೆ.

ನವದೆಹಲಿ: ಐಪಿಎಲ್ ಹಗರಣದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಅವರು ವೀಸಾ ಪಡೆಯಲು ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಸುಷ್ಮಾ ಮಾಡಿದ್ದರಲ್ಲಿ ತಪ್ಪೇನಿಲ್ಲ ಎಂದು ಹೇಳಿದೆ.

ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ವೀಸಾಗೆ ನೆರವು ನೀಡಿದ ಪ್ರಕರಣ ಇದೀಗ ವಿವಾದತ್ತೆ ಗುರಿಯಾಗಿದ್ದು, ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸುಷ್ಮಾ ಸ್ವರಾಜ್ ಅವರ ರಾಜಿನಾಮೆಗೆ ಆಗ್ರಹಿಸಿವೆ. ಅಲ್ಲದೆ ಇಂದು ಲಲಿತ್ ಮೋದಿಗೆ ವೀಸಾ ಕೊಡಿಸಿದ ಸುಷ್ಮಾ ಸ್ವರಾಜ್ ನಾಳೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗೂ ವೀಸಾ ಕೊಡಿಸುತ್ತಾರೆಯೇ ಎಂದು ಪ್ರಶ್ನಿಸಿವೆ.

ಇತ್ತ ಕೇಂದ್ರ ವಿದೇಶಾಂಗ ಸಚಿವರ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ ಮುಂದುವರೆದಿರುವಂತೆಯೇ ಅತ್ತ ಕೇಂದ್ರ ಬಿಜೆಪಿ ಘಟಕ ಸುಷ್ಮಾ ಅವರ ಬೆಂಬಲಕ್ಕೆ ನಿಂತಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸುಷ್ಮಾ ಸ್ವರಾಜ್ ಅವರಲ್ಲಿ ವಿವರ ಕೇಳಿದ್ದು, ದೆಹಲಿಯಲ್ಲಿ ಕೆಲ ಹಿರಿಯ ಸಚಿವರೊಂದಿಗೆ ಸಭೆ ಕೂಡ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಪಾಲ್ಗೊಂಡ ಬಳಿಕ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಸುಷ್ಮಾ ಸ್ವರಾಜ್ ಅವರ ಕಾರ್ಯದಲ್ಲಿ ತಮಗೆ ಯಾವುದೇ ರೀತಿಯ ತಪ್ಪು ಕಾಣುತ್ತಿಲ್ಲ. ಅವರು ಮಾಡಿದ್ದು ಸರಿಯಾಗಿಯೇ ಇದೆ. ಮಾನವೀಯ ದೃಷ್ಟಿಕೋನದಿಂದ ಅವರು ಲಲಿತ್ ಮೋದಿಗೆ ಸಹಾಯ ಮಾಡಿದ್ದಾರೆ ಎಂದು ಸುಷ್ಮಾ ಸ್ವರಾಜ್ ಅವರೆ ಬೆಂಬಲ ನೀಡಿದ್ದಾರೆ.

"ಸುಷ್ಮಾ ಸ್ವರಾಜ್ ಮಾಡಿದ್ದರಲ್ಲಿ ತಪ್ಪಿಲ್ಲ. ಕಾನೂನಿನ ಅನ್ವಯವೇ ಅವರು ನಡೆದುಕೊಂಡಿದ್ದಾರೆ. ಲಲಿತ್ ಮೋದಿ ಅವರ ಪತ್ನಿ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಹೀಗಾಗಿ ಮಾನವೀಯ ದೃಷ್ಟಿಕೋನದಲ್ಲಿ ಲಲಿತ್ ಮೋದಿ ಪ್ರಕರಣವನ್ನು ಸ್ವೀಕರಿಸಿದ ಸುಷ್ಮಾ ಸ್ವರಾಜ್ ಅವರು ಬ್ರಿಟೀಷ್ ಸರ್ಕಾರದ ಕಾನೂನಿನಲ್ಲಿ ಅವಕಾಶವಿದ್ದರೆ ಮಾತ್ರ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿ ಎಂದು ಹೇಳಿದ್ದಾರಷ್ಟೇ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ತೈಲ ಸಂಸ್ಕರಣಾಗಾರಗಳ ಮೇಲಿನ ದಾಳಿ ನಿಲ್ಲಿಸಲು ಸಿದ್ಧ, ಆದ್ರೆ.. ಒಂದು ಷರತ್ತು': Zelensky ಹೇಳಿದ್ದೇನು?

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ