ಚಂದ್ರಬಾಬು ನಾಯ್ಡು 
ಪ್ರಧಾನ ಸುದ್ದಿ

ನೋಟಿಗಾಗಿ ಓಟು: ಎಫ್‌ಐಆರ್ ಸಲ್ಲಿಕೆಯಾದರೆ ಆಂಧ್ರ ಸಿಎಂ ರಾಜಿನಾಮೆ?

ನೋಟಿಗಾಗಿ ಓಟು ಹಗರಣದಲ್ಲಿ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ-ಆಂಟಿ ಕರಪ್ಷನ್ ಬ್ಯುರೊ) ತಮ್ಮ ವಿರುದ್ಧ ಎಫ್‌ಐಆರ್...

ಹೈದರಾಬಾದ್: ನೋಟಿಗಾಗಿ ಓಟು ಹಗರಣದಲ್ಲಿ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ-ಆಂಟಿ ಕರಪ್ಷನ್ ಬ್ಯುರೊ) ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇಯಾದರೆ ಮುಂಖ್ಯಮಂತ್ರಿ ಸ್ಥಾನ ತ್ಯಜಿಸಲು ಎನ್. ಚಂದ್ರಬಾಬು ನಾಯ್ಡು ಅವರು ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಒಂದು ವೇಳೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದರೆ, ನಾಯ್ಡು ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ, ತಮ್ಮ ನಂಬಿಕಸ್ಥ ಹಾಗೂ ಕೇಂದ್ರ ವಿಮಾನಯಾನ ಖಾತೆ ಸಚಿವ ಅಶೋಕ್ ಗಜಪತಿರಾಜು ಅವರನ್ನು ಮುಖ್ಯಮಂತ್ರಿ ಹುದ್ದೆಗೆ ತರಲು ನಿರ್ಧರಿಸಿದ್ದಾರೆ.

ಈ ಮಧ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ತೆಲಂಗಾಣ ಎಸಿಬಿ, ಇಂದು ಹೆಚ್ಚುವರಿ ಎಫ್‌ಐಆರ್ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರುವ ಸಾಧ್ಯತೆಗಳಿವೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು, ಹಿರಿಯ ಅಧಿಕಾರಿಗಳ ಹಾಗೂ ಸಂಪುಟ ಸಹೋದ್ಯೋಗಿಗಳ ಜತೆ ದೀರ್ಘಾವಧಿ ಸಭೆಗಳನ್ನು ನಡೆಸುತ್ತಿದ್ದಾರೆ.

ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿದ್ದೇ ಆದರೆ, ಗಜಪತಿ ರಾಜು ಅವರು ತಮ್ಮ ಹುದ್ದೆಗೇರಲಿದ್ದಾರೆ ಎಂಬ ವಿಷಯವನ್ನು ನಾಯ್ಡು ಅವರು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ ಎಂದು ವರದಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!