ಪ್ರಧಾನ ಸುದ್ದಿ

ಮುಂಬೈಯಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ, ರೈಲು ಸಂಚಾರ ಸ್ಥಗಿತ

Lingaraj Badiger

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮಹಾನಗರಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು,  ಹಲವು ಕಡೆ ರೈಲು ಸಂಚಾರ ಸ್ಥಗಿತಗೊಂಡಿದೆ.

ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ರೈಲು ಹಾಗೂ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಮುಂಬೈ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

ದಕ್ಷಿಣ ಮುಂಬೈ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.ರೈಲು ನಿಲ್ದಾಣಗಳಲ್ಲಿ ನೀರು ತುಂಬಿಕೊಂಡಿದ್ದರೆ, ರಸ್ತೆ, ಚರಂಡಿ ನೀರೆಲ್ಲಾ ಹರಿದು ಪ್ರವಾಹದಂತಹ ಸ್ಥಿತಿ ಉಂಟಾಗಿದೆ. ರೈಲು ಹಳಿಗಳು ನೀರಿನಿಂದ ಸಂಪೂರ್ಣ ಮುಳುಗಿ ಹೋಗಿವೆ. ಈ ಹಿನ್ನೆಲೆಯಲ್ಲಿ ಛತ್ರಪತಿ ಶಿವಾಜಿ ಟರ್ಮಿನಸ್(ಸಿಎಸ್ಟಿ) ಮತ್ತು ಕುರ್ಲಾ, ಸೆಂಟ್ರಲ್ ಪ್ರದೇಶದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

ಮಳೆಯಿಂದಾಗಿ ಮುಂಬೈ ಕೇಂದ್ರ ಹಾಗೂ ಪಶ್ಚಿಮ ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಜನರು ರೈಲಿನಲ್ಲಿ ಪ್ರಯಾಣಿಸಲು ಪರದಾಡುತ್ತಿದ್ದಾರೆ. ನಿಮಗೆ ತುಂಬಾ ಅಗತ್ಯವಿದ್ದರೆ ಮಾತ್ರ ಪ್ರಯಾಣ ಕೈಗೊಳ್ಳಿ ಎಂದು ರೈಲ್ವೆ ಇಲಾಖೆ ಪ್ರಯಾಣಿಕರಲ್ಲಿ ಮನವಿ ಮಾಡಿಕೊಂಡಿದೆ.

SCROLL FOR NEXT