ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮಚ್ಲಿ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗಳದಲ್ಲಿ ಭಾರತದತ್ತ ನುಸುಳಲು ನಡೆಸಿದ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಒಬ್ಬ ಗೆರಿಲ್ಲಾ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
"ಎಚ್ಚರವಿದ್ದ ಪಡೆಗಳು, ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರು ಜಲಂಧರ್ ಪೋಸ್ಟ್ ಬಳಿ ಭಾರತಕ್ಕೆ ನುಗ್ಗಲು ನಡೆಸಿದ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಈ ಘಟನೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಹಾಗೂ ಈ ಪ್ರದೇಶದಲ್ಲಿ ಗುಂಡಿನ ಕಾಳಗ ಮುಂದುವರೆದಿದೆ" ಎಂದು ಅವರು ತಿಳಿಸಿದ್ದಾರೆ.