ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಪಠ್ಯ ಪುಸ್ತಕದಲ್ಲಿ ಯೋಗಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಉನ್ನತ ಶಿಕ್ಷಣದ ಭಾಗವಾಗಿರುವ ಯೋಗವನ್ನು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣದ ಪಠ್ಯದಲ್ಲಿ ಅಳವಡಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ
Srinivasa Murthy VN
Updated On : 21 Jun 2015, 2:01 am

ಬೆಂಗಳೂರು: ರಾಜ್ಯದಲ್ಲಿ ಉನ್ನತ ಶಿಕ್ಷಣದ ಭಾಗವಾಗಿರುವ ಯೋಗವನ್ನು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣದ ಪಠ್ಯದಲ್ಲಿ ಅಳವಡಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆಯುಷ್ ಇಲಾಖೆ ವಿಧಾನಸೌಧದ ಅಂಗಳದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವದ ಮೊಟ್ಟ ಮೊದಲ ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಿ ಅವರು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಉನ್ನತ ಶಿಕ್ಷಣದ ಭಾಗವಾಗಿರುವ ಯೋಗ ವಿಷಯವನ್ನು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣದ ಪಠ್ಯದಲ್ಲಿ ಅಳವಡಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಸಿಎಂ ಹೇಳಿದರು.

"ತಾವು ಈ ಹಿಂದೆ ಯೋಗಾಭ್ಯಾಸ ಕಲಿತಿದ್ದು, ಕೆಲದಿನಗಳವರೆಗೆ ಅಭ್ಯಾಸ ಮಾಡಿ ನಿಲ್ಲಿಸುತ್ತಿದ್ದೆ. ಬಳಿಕ ಹೀಗೆ ಮಾಡುವುದರಿಂದ ಪ್ರಯೋಜನವಾಗುವುದಿಲ್ಲ. ಪ್ರತಿನಿತ್ಯ ಮಾಡಿದರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವೆಂಬ ಸತ್ಯದ ಅರಿವಾಯಿತು. ಹೀಗಾಗಿ ಕಳೆದ 8 ತಿಂಗಳಿನಿಂದ ಪ್ರತಿನಿತ್ಯ ಯೋಗಾಭ್ಯಾಸ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರಧಾನಿ ಮೋದಿಗೆ ಸಿಎಂ ಮೆಚ್ಚುಗೆ
ಇದೇ ವೇಳೆ ವಿಶ್ವ ಯೋಗ ದಿನಾಚರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೆಚ್ಚುಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಆಸಕ್ತಿ ತೋರಿದ್ದರಿಂದಲೇ ವಿಶ್ವಸಂಸ್ಥೆ ಜೂ.21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವಾಗಿ ಘೊಷಣೆ ಮಾಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್ ಅವರು ಮಾತನಾಡಿ, ಮಧುಮೇಹ ಖಾಯಿಲೆಯ ರಾಜಧಾನಿಯಾಗಿ ಮಾರ್ಪಡುತ್ತಿರುವ ಭಾರತೀಯರ ಆರೋಗ್ಯ ಕಾಪಾಡಲು ಯೋಗಾಭ್ಯಾಸ ದಿವ್ಯೌಷಧ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸುಮಾರು 2000 ಎನ್​ಸಿಸಿ ಕೆಡೆಟ್​ಗಳು 45 ನಿಮಿಷಗಳ ಕಾಲ ಯೋಗಾಭ್ಯಾಸ ಮಾಡಿದರು. ಯೋಗ ಮಾಡಲು ಸ್ಥಳಾವಕಾಶದ ಕೊರತೆಯಿಂದಾಗಿ ಯೋಗಾಸನ ಮಾಡಲು ಸಾಧ್ಯವಾಗದೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಅನಂತ್​ ಕುಮಾರ್, ಸಚಿವರಾದ ಯು.ಟಿ. ಖಾದರ್, ಆರ್.ವಿ. ದೇಶಪಾಂಡೆ, ಉಮಾಶ್ರೀ, ಶಾಸಕರಾದ ಅರುಣಾ ಶಹಾಪುರ ಮತ್ತು ತಾರಾ ಅನುರಾಧಅವರು ಕುಳಿತಲ್ಲೇ ಅಲೋಮ, ವಿಲೋಮ ಕ್ರಿಯೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments