ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಲೋಕಾ ಕಚೇರಿಯಲ್ಲಿ ಲಂಚ ವರದಿಗೆ ನ್ಯಾ. ಅಡಿ ಆದೇಶ

ಲೋಕಾಯುಕ್ತ ಕಚೇರಿ ಅಧಿಕಾರಿ ಹೆಸರು ಹೇಳಿಕೊಂಡು ಕಾರ್ಯ ನಿರ್ವಾಹಕ ಎಂಜಿನಿಯರ್ ಒಬ್ಬರಿಂದ ರು.1 ಕೋಟಿ ಹಣಕ್ಕೆ ಬೆದರಿಕೆ ಹಾಕಿರುವ ಪ್ರಕರಣ...

ಬೆಂಗಳೂರು: ಲೋಕಾಯುಕ್ತ ಕಚೇರಿ ಅಧಿಕಾರಿ ಹೆಸರು ಹೇಳಿಕೊಂಡು ಕಾರ್ಯ ನಿರ್ವಾಹಕ
ಎಂಜಿನಿಯರ್ ಒಬ್ಬರಿಂದ ರು.1 ಕೋಟಿ ಹಣಕ್ಕೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಎಸ್ಪಿ ಸೋನಿಯಾ ನಾರಂಗ್ ಅವರಿಗೆ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ನಿರ್ದೇಶನ ನೀಡಿದ್ದಾರೆ.

ಲೋಕೋಪಯೋಗಿ ಇಲಾಖೆ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಎಂಜಿನಿಯರ್
ಕೃಷ್ಣಮೂರ್ತಿ ಎಂಬುವರಿಗೆ ಕರೆ ಮಾಡಿದ ವ್ಯಕ್ತಿಯೋಬ್ಬ, ತಾನು ಕೃಷ್ಣರಾವ್ ಎಂದು ಪರಿಚಯಿಸಿಕೊಂಡು `ಭ್ರಷ್ಟಾಚಾರದಲ್ಲಿ ತೊಡಗಿರುವ ನಿಮ್ಮ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಲಾಗುತ್ತದೆ. ದಾಳಿ ಮಾಡದಿರಲು ರು.1 ಕೋಟಿ ಲಂಚ ನೀಡಬೇಕು' ಎಂದು ಬೆದರಿಕೆ ಹಾಕಿದ್ದರು.

ಈ ಸಂಬಂಧ ಕೃಷ್ಣಮೂರ್ತಿ ಅವರು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರನ್ನು ಭೇಟಿ ಮಾಡಿ ತಮಗೆ ಬರುತ್ತಿರುವ ಬೆದರಿಕೆ ಕರೆ ಬಗ್ಗೆ ದೂರು ನೀಡಿದ್ದರು. ಅಲ್ಲದೇ, ಬೆದರಿಕೆ ಹಾಕುತ್ತಿರುವ ವ್ಯಕ್ತಿ ನಿಮ್ಮ ಹೆಸರು (ಸೋನಿಯಾ ನಾರಂಗ್) ಹೇಳುತ್ತಿದ್ದಾನೆ ಎಂದು ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ರಿಜಿಸ್ಟ್ರಾರ್ ಗೆ ಪತ್ರ ಬರೆದ ಎಸ್ಪಿ ಸೋನಿಯಾ ನಾರಂಗ್, `ತಮ್ಮ ಹೆಸರು ಹೇಳಿಕೊಂಡು ಅಧಿಕಾರಿ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿರುವ ವ್ಯಕ್ತಿಗಳ ಬಗ್ಗೆ ತನಿಖೆಯಾಗಬೇಕೆಂದು' ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!