ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ 
ಪ್ರಧಾನ ಸುದ್ದಿ

ಎಚ್ಡಿಕೆ, ಬಿಎಸ್‍ವೈ ಕುತೂಹಲದ ಭೇಟಿ

ಸದಾ ಆರೋಪ-ಪ್ರತ್ಯಾರೋಪಗಳಲ್ಲೇ ನಿರತರಾಗಿರುತ್ತಿದ್ದ ಮಾಜಿ ಸಿಎಂಗಳು ಪರಸ್ಪರ ಮಾತುಕತೆ ನಡೆಸುವುದರ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ...

ಹುಬ್ಬಳ್ಳಿ: ಸದಾ ಆರೋಪ-ಪ್ರತ್ಯಾರೋಪಗಳಲ್ಲೇ ನಿರತರಾಗಿರುತ್ತಿದ್ದ ಮಾಜಿ ಸಿಎಂಗಳು ಪರಸ್ಪರ ಮಾತುಕತೆ ನಡೆಸುವುದರ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಹುಬ್ಬಳ್ಳಿಯ ಪ್ರವಾಸಿಗೃಹದಲ್ಲಿ ಮಂಗಳವಾರ ಮುಖಾಮುಖಿಯಾಗಿ ಚರ್ಚೆ ನಡೆಸಿದರು. ಸೋಮವಾರ ಮಧ್ಯಾಹ್ನವೇ ಕುಮಾರಸ್ವಾಮಿ ಪ್ರವಾಸಿ ಗೃಹಕ್ಕೆ ಬಂದಿದ್ದರು. ಪಾದಯಾತ್ರೆ ಹಿನ್ನೆಲೆಯಲ್ಲಿ ಅವರು ಕಾರ್ಯಕ್ರಮದ ರೂಪುರೇಷೆ ಕೈಗೊಳ್ಳಲು ಇಲ್ಲಿಗೆ ಬಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜತೆ ಸಭೆ ನಡೆಸಿ ಸಲಹೆ ಸೂಚನೆ ನೀಡುತ್ತಿದ್ದರು.

ಮಂಗಳವಾರ ಬೆಳಗ್ಗೆ ಬೆಂಗಳೂರಿಂದ ಹುಬ್ಬಳ್ಳಿಗೆ ಬಂದಿಳಿದ ಬಿ.ಎಸ್. ಯಡಿಯೂರಪ್ಪ ಅವರೂ ಪ್ರವಾಸಿಗೃಹಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ಮುಖಾಮುಖಿಯಾಗಿದ್ದಾರೆ. 10 ನಿಮಿಷ ಮಾತುಕತೆ: ಪರಸ್ಪರ ಉಭಯಕುಶಲೋಪರಿ ವಿಚಾರಿಸಿಕೊಂಡ ಬಳಿಕ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರು ಸುಮಾರು ಹತ್ತು
ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಮಾತುಕತೆ ನಂತರ ಯಡಿಯೂರಪ್ಪ ಬೆಳಗಾವಿಗೆ ಪ್ರಯಾಣ ಬೆಳೆಸಿದರು.

ಅನಿರೀಕ್ಷಿತ ಭೇಟಿ ಎಂದ ಕುಮಾರ: ಇದೊಂದು ಅನಿರೀಕ್ಷಿತ ಹಾಗೂ ಸೌಹಾರ್ದಯುತ ಭೇಟಿ. ನಾವು ಉಭಯ ಕುಶಲೋಪರಿ ವಿಚಾರಿಸಿಕೊಂಡಿದ್ದೆವೇಯೇ ವಿನಃ ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರಾಜ್ಯ ಸರ್ಕಾರ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದು ಸರಿಯಾದ ಕ್ರಮ ಅಲ್ಲ. ಸರ್ಕಾರ ಹೀಗೆ ಮಾಡಬಾರದಿತ್ತು ಎಂದು ಅವರ ಬಳಿ ನಾನು ಪ್ರತಿಕ್ರಿಯಿಸಿದ್ದೇನೆ. ಅದಕ್ಕೆ ಪ್ರತಿಕ್ರಿಯಿಸಿದ್ದೇನೆ. ಅದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಅವರು ಸರ್ಕಾರದವರು ಏನು ಮಾಡುತ್ತಾರೆಯೋ ಮಾಡಲಿ ಎಂದಷ್ಟೇ ಉತ್ತರಿಸಿದರು ಎಂದು ತಿಳಿಸಿದ ಎಚ್ ಡಿಕೆ, ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ