ಮೈಸೂರು: ರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಮತ್ತೊಬ್ಬ ರೈತ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂಜನಗೂಡು ತಾಲೂಕಿನ ಸಿಬ್ಬೇಗೌಡನಹುಂಡಿಯ ರೈತ ಶಿವಲಿಂಗೇಗೌಡ(40) ವಿವಿಧ ಬ್ಯಾಂಕ್‌ಗಳಲ್ಲಿ ಐದು ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಸಾಲ ತೀರಿಸಲು ಸಾಧ್ಯವಾಗದೇ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಬ್ಬು ಮತ್ತು ಹತ್ತೆ ಬೆಳೆಗಾಗಿ ಶಿವಲಿಂಗೇಗೌಡ ಐದು ಲಕ್ಷ ರುಪಾಯಿ ಸಾಲ ಪಡೆದಿದ್ದರು. ಆದರೆ ಕಬ್ಬಿಗೆ ಸರಿಯಾದ ಬೆಲೆ ಸಿಗದೆ, ಬಾಕಿ ಪಾವತಿಯಾಗದೇ ಇರುವುದರಿಂದ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ನೊಂದು ಇಂದು ತಮ್ಮ ಹೊಲದಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.