ಜಗದೀಶ್ ಕಿಡೇಗಣ್ಣಿ 
ಪ್ರಧಾನ ಸುದ್ದಿ

ಸಾಲಬಾಧೆ: ಹಾವೇರಿಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ

ರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಗುರುವಾರ ಮಂಡ್ಯದಲ್ಲಿ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ, ಅದರೊಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ...

ಹಾವೇರಿ: ರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಗುರುವಾರ ಮಂಡ್ಯದಲ್ಲಿ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ, ಅದರೊಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆಯ ಬೆನ್ನಲ್ಲೇ ಶುಕ್ರವಾರ ಮೈಸೂರಿನಲ್ಲಿ ಮತ್ತೊಬ್ಬ ರೈತ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದರು. ಸಾಲಬಾಧೆ ತಾಳದೇ ಶನಿವಾರ ಹಾವೇರಿಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ತಾಲೂಕಿನ ಕೂರಗುಂದ ಗ್ರಾಮದ 32 ವರ್ಷದ ಜಗದೀಶ್ ಕಿಡೇಗಣ್ಣಿ ಸಾಲಬಾಧೆ ತಾಳದೇ ಇಂದು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ವಿವಿಧ ಬ್ಯಾಂಕ್‌ಗಳಲ್ಲಿ ಮೂರು ಲಕ್ಷಕ್ಕೂ ಅಧಿಕ ಮಾಡಿಕೊಂಡಿದ್ದ ಎನ್ನಲಾಗಿದೆ.

ಇನ್ನು ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರ ಕಷ್ಟಗಳಿಗೆ ಆತ್ಮಹತ್ಯೆಯೊಂದೇ ಪರಿಹಾರ ಅಲ್ಲ. ರೈತರಿಗೆ ಏನೇ ಸಮಸ್ಯೆ ಇದ್ದರೂ ಸರ್ಕಾರ ಬಗೆಹರಿಸುತ್ತದೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಸಿಎಂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!