ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ 100 ಕೋಟಿ ಲಂಚ ಆರೋಪ ಪ್ರಕರಣದ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಮನವಿ ಮೇರೆಗೆ ಪ್ರಕರಣದ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.
ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್ ಅವರು ಹಗರಣದ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಕಮಲ್ ಪಂಥ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದು, ಲೋಕಾಯುಕ್ತರ ಪುತ್ರ ಹಾಗೂ ಇತರರ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲಿದೆ.
ಭಾಸ್ಕರ್ ರಾವ್ ಅವರ ಮನವಿ ಮೆರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ತಮ್ಮ ಪುತ್ರನ ವಿರುದ್ಧ ತನಿಖೆ ನಡೆಸದಂತೆ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರಿಗೆ ಸೂಚಿಸಿದ್ದ ನ್ಯಾ.ವೈ.ಭಾಸ್ಕರ್ ರಾವ್ ಅವರು, ಈ ಸಂಬಂಧ ಕೌಶಿಕ್ ಮುಖರ್ಜಿ ಅವರಿಗೆ ಎರಡು ಪತ್ರಗಳನ್ನು ಬರೆದು, ಎಡಿಜಿಪಿ ಮಟ್ಟದ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಿದ್ದರು.