ಯೋಗೇಂದ್ರ ಯಾದವ್ 
ಪ್ರಧಾನ ಸುದ್ದಿ

ಆಪ್ ನಲ್ಲಿ ಬಿಕ್ಕಟ್ಟು ಇಲ್ಲ: ಯೋಗೇಂದ್ರ ಯಾದವ್

ಆಮ್ ಆದ್ಮಿ ಪಕ್ಷದಲ್ಲಿ ಬಿಕ್ಕಟ್ಟು ಉಂಟಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಆಪ್ ಹಿರಿಯ ನೇತಾರ...

ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ ಬಿಕ್ಕಟ್ಟು ಉಂಟಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಆಪ್ ಹಿರಿಯ ನೇತಾರ ಯೋಗೇಂದ್ರ ಯಾದವ್ ಹೇಳಿದ್ದಾರೆ. ಆಪ್‌ನಲ್ಲಿ ಅಂಥದ್ದೇನೂ ಸಂಭವಿಸಿಲ್ಲ. ನಾವು  ಚುನಾವಣೆಯಲ್ಲಿ ಗೆಲವು ಸಾಧಿಸಿದ ನಂತರ ಮುಂದಿನ ಕಾರ್ಯಗಳ ಬಗ್ಗೆ ಯೋಚಿಸುತ್ತಿದ್ದೇವೆ. ದೆಹಲಿಯ ಜನರು ನಮಗೆ ದೊಡ್ಡ ಜವಾಬ್ದಾರಿಯನ್ನು ವಹಿಸಿದ್ದಾರೆ. ಅದೆಲ್ಲದರ ನಡುವೆ ಬಿಕ್ಕಟ್ಟು ಉಂಟುಮಾಡುವಂತಹ ಸಣ್ಣತನದ ಕಾರ್ಯಗಳನ್ನು ನಾವು ಮಾಡಲ್ಲ.

ಕೆಲವು ದಿನಗಳಿಂದೀಚೆಗೆ ನನ್ನ ಮತ್ತು ಪ್ರಶಾಂತ್ ಭೂಷಣ್ ಅವರ ಬಗ್ಗೆ ಹಲವಾರು ಸುದ್ದಿಗಳು ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಮ್ಮ ಬಗ್ಗೆ ಹೊಸ ಹೊಸ ಕತೆಗಳನ್ನು ಸೃಷ್ಟಿಸಿ, ವಿವಾದಗಳನ್ನು ಹುಟ್ಟಿ ಹಾಕಲಾಗುತ್ತಿದೆ. ಆದರೆ ಇದೆಲ್ಲವೂ ತಮಾಷೆಯಂತೆ ನನಗೆ ಕಾಣುತ್ತಿದೆ. ಯಾಕೆಂದರೆ ಇದೆಲ್ಲವೂ ನಿರಾಧಾರಿತ. ಅಂಥಾ ಕತೆಗಳನ್ನು ಸೃಷ್ಟಿಸುವವರ ಬಗ್ಗೆ ನನಗೆ ಮರುಕವಿದೆ. ದೆಹಲಿ ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ. ನಮ್ಮಿಂದ ಅವರಿಗೆ ದೊಡ್ಡ ನಿರೀಕ್ಷೆಯಿದೆ. ಈ ನಿರೀಕ್ಷೆಯನ್ನು ಹುಸಿ ಮಾಡುವ ಕಾರ್ಯಗಳನ್ನು ನಾವು ಮಾಡಲ್ಲ ಎಂದು ಯಾದವ್ ತಮ್ಮ ಫೇಸ್‌ಬುಕ್‌ನಲ್ಲಿ ಬೆರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್