ಮನಮೋಹನ್ ಸಿಂಗ್‌ 
ಪ್ರಧಾನ ಸುದ್ದಿ

ಕಲ್ಲಿದ್ದಲು ಹಗರಣ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಸಮನ್ಸ್

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ 6 ಆರೋಪಿಗಳಿಗೆ ಬುಧವಾರ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ 6 ಆರೋಪಿಗಳಿಗೆ ಬುಧವಾರ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್‌ನ ನ್ಯಾಯಾಧೀಶ ಭರತ್ ಪರಾಶರ್ ಅವರು, ಉದ್ಯಮಿ, ಕುಮಾರ್ ಮಂಗಲಂ ಬಿರ್ಲಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿ.ಸಿ.ಪರಾಖ್ ಮತ್ತು ಇತರೆ ಮೂವರು ಆರೋಪಿಗಳಿಗೆ ಏಪ್ರಿಲ್ 8ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

ಇದೇ ಪ್ರಕರಣ ಸಂಬಂಧ ಈ ಹಿಂದೆ ಸಿಬಿಐ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಬಿರ್ಲಾ ಅವರು 2005ರ ಮೇ 7ರಂದು ಮತ್ತು ಜೂನ್ 17ರಂದು ಎರಡು ಪತ್ರಗಳನ್ನು ಬರೆದ ಹಿನ್ನೆಲೆಯಲ್ಲಿ ಕಲ್ಲಿದ್ದಲು ಸಚಿವಾಲಯ ಮತ್ತು ಪ್ರಧಾನಿ ಕಾರ್ಯಾಲಯದ ವಿದ್ಯಾಮಾನಗಳ ಕುರಿತು ಸಿಬಿಐ ಮನಮೋಹನ್ ಸಿಂಗ್ ಅವರನ್ನು ಪ್ರಶ್ನಿಸಿತ್ತು.

2004ರಿಂದ 2009ರ ವರೆಗಿನ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಸೇರಿದಂತೆ ಒಟ್ಟು 6 ಮಂದಿಯ ವಿರುದ್ಧ, ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿತ್ತು.

ಇನ್ನು ಕೋರ್ಟ್ ಸಮನ್ಸ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ, ಸಮನ್ಸ್‌ನಿಂದ ನನಗೆ ನೋವಾಗಿದೆ. ಆದರೆ ಪ್ರಕರಣದ ತನಿಖಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್