ಪ್ರಧಾನ ಸುದ್ದಿ

ಐಎಎಸ್ ಅಧಿಕಾರಿ ರವಿ ನಿಗೂಢ ಸಾವು: ರಾಜ್ಯಾದ್ಯಂತ ಪ್ರತಿಭಟನೆ

Mainashree

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿಗೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆ ಕೈಗೊಳ್ಳಲಾಗಿದೆ.

ಬೆಂಗಳೂರಿನ ನವರಂಗ್ ವೃತ್ತದ ಬಳಿ, ಕೊಪ್ಪಳ ಜಿಲ್ಲೆಯಲ್ಲಿ ರವಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇನ್ನೂ ಕೋಲಾರ ಮತ್ತು ತುಮಕೂರಿನಲ್ಲಿ ಬಂದ್ ಘೋಷಿಸಲಾಗಿದ್ದು, ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ದಾರೆ. ರವಿ ಸಾವಿನ ಹಿಂದಿನ ರಹಸ್ಯವನ್ನು ಭೇದಿಸಿ, ಅಪರಾಧಿಗಳಿಗೆ ಶಿಕ್ಷೆ ಕೊಡುವಂತೆ ರಾಜ್ಯಾದ್ಯಂತ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣ ಕುರಿತು ನ್ಯಾಯಯುತವಾಗಿ ತನಿಖೆ ನಡೆಸಲಾಗುತ್ತದೆ, ಸತ್ಯ ಹೊರಬೀಳಲಿದೆ. ರವಿ ಅವರ ಸಾವು ಸರ್ಕಾರಕ್ಕೆ ದೊಡ್ಡ ನಷ್ಟ ತಂದುಕೊಟ್ಟಿದೆ ಎಂದು ಹೇಳಿದ್ದಾರೆ.

ಪ್ರಕರಣದ ತನಿಖಾ ತಂಡ ಕೋರಮಂಗಲದಲ್ಲಿರುವ ರವಿ ಅವರ ಮನೆಗೆ ಬೀಗ ಜಡೆದಿದ್ದು, ಅವರ ಕಛೇರಿಗೆ ಭೇಟಿ ನೀಡಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಾಗರಬಾವಿಯಲ್ಲಿರುವ ಅವರ ಮಾವನ ಮನೆಯಲ್ಲಿ ರವಿಯವರ ಮೃತದೇಹವನ್ನು ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.

ಇಂದು ಸಂಜೆ 5.30ಕ್ಕೆ ತುಮಕೂರಿನ ದೊಡ್ಡಕೊಪ್ಪಲಿನಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.

SCROLL FOR NEXT