ಡಿ.ಕೆ.ರವಿ ನಿಗೂಢ ಸಾವು: ಬಿಜೆಪಿಯಿಂದ ರಾಜನಾಥ್ ಸಿಂಗ್ ಭೇಟಿ, ವರದಿ ನಿರೀಕ್ಷೆಯಲ್ಲಿ ಕೇಂದ್ರ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ,..
ನವದೆಹಲಿ: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ, ಇದೀಗ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರದ ಗಮನ ಸೆಳೆದಿದೆ.
ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದ ಬಿಜೆಪಿ ನಿಯೋಗ ಇಂದು ರಾಜನಾಥ್ ಸಿಂಗ್ ಅವರನ್ನು ಭೇಟಿ, ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಮನವಿ ಪತ್ರ ನೀಡಿದರು.
ರಾಜನಾಥ್ ಸಿಂಗ್ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್, ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ನಾವು ಒತ್ತಾಯಿಸಿದ್ದೇವೆ ಎಂದರು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು, ರಾಜ್ಯ ಸರ್ಕಾರದಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.