ಡಿ.ಕೆ.ರವಿ ಪೋಷಕರೊಂದಿಗೆ ಸಿಎಂ (ಚಿತ್ರ - ನಾಗರಾಜ್ ಗಡೇಕಲ್ ) 
ಪ್ರಧಾನ ಸುದ್ದಿ

ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ, ಸಿಎಂ ಭರವಸೆಗೆ ಒಪ್ಪದ ರವಿ ಪೋಷಕರು

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರವಿ ಅವರ ಪೋಷಕರ ಮನವೊಲಿಸುವಲ್ಲಿ ಮುಖ್ಯಮಂತ್ರಿ...

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರವಿ ಅವರ ಪೋಷಕರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲವಾಗಿದ್ದಾರೆ.

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರವಿ ಅವರ ತಂದೆ ಕರಿಯಪ್ಪ, ತಾಯಿ ಗೌರಮ್ಮ ಹಾಗೂ ಸಹೋದರ ರಮೇಶ್ ಸೇರಿದಂತೆ ಹಲವು ಸಂಬಂಧಿಕರು ಇಂದು ಮಧ್ಯಾಹ್ನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಜೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು, ಪೋಷಕರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದರು.

ಮಗನನ್ನು ಕಳೆದುಕೊಂಡ ನೋವು ನಮಗೂ ಅರ್ಥ ಆಗುತ್ತೆ. ರವಿ ಸಾವಿನಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿನ ಕುರಿತು ಸಮರ್ಪಕ ತನಿಖೆ ನಡೆಸುತ್ತೇವೆ. ಸಿಐಡಿ ತನಿಖೆಯ ಮೇಲೆ ವಿಶ್ವಾಸವಿಡಿ ಎಂದು ಸಿಎಂ ಮನವಿ ಮಾಡಿದರು.

ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ, ಯುಗಾದಿಯ ನಂತರ ಸಿಬಿಐ ತನಿಖೆಗೆ ಒಪ್ಪಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆದರೆ ಇದಕ್ಕೆ ಒಪ್ಪದ ಪೋಷಕರು ಮರಣೋತ್ತರ ಪರೀಕ್ಷಾ ವರದಿ ಬರುವವರೆಗೂ ಪ್ರತಿಭಟನೆ ಮುಂದೂವರೆಸುವುದಾಗಿ ಹೇಳಿದರು.

ಇದಕ್ಕೂ ಮುನ್ನ ಪ್ರತಿಭಟನಾ ನಿರತ ರವಿ ಪೋಷಕರನ್ನು ಮುಖ್ಯಮಂತ್ರಿಗಳ ಕಚೇರಿ ಮಾತುಕತೆಗೆ ಆಹ್ವಾನ ನೀಡಿತ್ತು, ಆದರೆ ಆಹ್ವಾನವನ್ನು ತಿರಸ್ಕರಿಸಿದ್ದ ಪೋಷಕರು, ತಮ್ಮ ಮಗನ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವವರೆಗೆ ತಾವು ಯಾರೊಂದಿಗೂ ಮಾತುಕತೆ ನಡೆಸುವುದಿಲ್ಲ ಎಂದಿದ್ದರು. ಅಲ್ಲದೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸದಿದ್ದರೆ ತಾವು ವಿಧಾಸೌಧದ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT