ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವ ಯತ್ನಕ್ಕೆ ತಮಿಳುನಾಡು 'ಅಡ್ಡಿ'
ಚೆನ್ನೈ: ಮೇಕೆದಾಟು ಮೇಲ್ಭಾಗದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಚೆಕ್-ಡ್ಯಾಮ್ ನಿರ್ಮಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಯತ್ನಕ್ಕೆ ತಮಿಳುನಾಡು ಸರ್ಕಾರ ಈಗ ಅಡ್ಡಗಾಲು ಹಾಕುತ್ತಿದೆ.
ಕಾನೂನು ಹೋರಾಟ ಸೇರಿದಂತೆ ಮೇಕೆದಾಟು ಅಣೆಕಟ್ಟು ನಿರ್ಮಾಣ ತಡೆಯಲು ಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ತಮಿಳುನಾಡು ಸರ್ಕಾರ ತೆಗೆದುಕೊಂಡಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಓ ಪನ್ನೀರ್ಸೇಲ್ವಂ ಅವರು ಬುಧವಾರ ಹೇಳಿದ್ದಾರೆ.
ಕಾನೂನು ಬಾಹಿರವಾಗಿ ಮೇಕೆದಾಟು ಚೆಕ್-ಡ್ಯಾಮ್ ನಿರ್ಮಾಣಕ್ಕೆ ಮುಂದಾಗಿರುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ತಡೆ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ ಎಂದು ತಮಿನಾಡು ಸಿಎಂ ಹೇಳಿದರು.
'ಕಾನೂನು ಹೋರಾಟ ಸೇರಿದಂತೆ ಮೇಕೆದಾಟು ಅಣೆಕಟ್ಟು ನಿರ್ಮಾಣ ತಡೆಯಲು ಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ' ಎಂದು ಪನ್ನೀರ್ಸೇಲ್ವಂ ಅವರು ತಮ್ಮ 2015-16ನೇ ಸಾಲಿನ ಬಜೆಟ್ನಲ್ಲಿ ತಿಳಿಸಿದ್ದಾರೆ.
ಈ ಮಧ್ಯೆ ಕರ್ನಾಟಕ ಸರ್ಕಾರ ಸಹ ತನ್ನ ಬಜೆಟ್ನಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕಾಗಿ 25 ಕೋಟಿ ರುಪಾಯಿ ಮೀಸಲಿರಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.