ಬೆಂಗಳೂರು: ನಿಗೂಢವಾಗಿ ಸಾವನ್ನಪ್ಪದಿ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರು ನನ್ನ ಪತ್ನಿಗೆ ಕೇವಲ ನಾಲ್ಕು ಬಾರಿ ಮಾತ್ರ ಕಾಲ್ ಮಾಡಿದ್ದಾರೆ. 44 ಬಾರಿ ಅಲ್ಲ ಎಂದು ವಿಚಾರಣೆ ಮಹಿಳಾ ಐಎಎಸ್ ಅಧಿಕಾರಿ ಪತಿ ಹೇಳಿದ್ದಾರೆ.
ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ತಡೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಮಹಿಳಾ ಅಧಿಕಾರಿ ಪತಿ ಈ ವಿಷಯ ಸ್ಪಷ್ಟಪಡಿಸಿರುವುದು ಇದೀಗ ಬಯಲಾಗಿದೆ.
ರಿಟ್ ಅರ್ಜಿ ವಿಚಾರಣೆ ವೇಳೆ ಮಹಿಳಾ ಐಎಎಸ್ ಅಧಿಕಾರಿ ಪತಿ ಪರ ವಾದ ಮಂಡಿಸಿದ ಸಜ್ಜನ್ ಪೂವಯ್ಯ ಅವರು, ಡಿ.ಕೆ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದರು. ಇದೇ ಮಾಹಿತಿಯನ್ನು ಆಧರಿಸಿ ಮಾಧ್ಯಮಗಳು ಸಹ ವರದಿ ಮಾಡಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಡಿ.ಕೆ. ರವಿ ಅವರು ಸಾಯುವ ಮುನ್ನ ಮಹಿಳಾ ಐಎಎಸ್ ಅಧಿಕಾರಿಗೆ 44 ಬಾರಿ ಕಾಲ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ ಒಂದು ಗಂಟೆಯಲ್ಲಿ 44 ಬಾರಿ ಕರೆ ಮಾಡಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ರವಿ ಮಹಿಳಾ ಅಧಿಕಾರಿಗೆ ಕರೆ ಮಾಡಿದಾಗ ಅವರ ಪತಿ ಕೂಡಾ ಜೊತೆಯಲ್ಲೇ ಇದ್ದರು, ರವಿ ನಾಲ್ಕ ಬಾರಿ ಮಾತ್ರ ಕರೆ ಮಾಡಿದ್ದರು, 44 ಬಾರಿ ಅಲ್ಲ ಎಂದು ವಕೀಲರು ಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟರು.
ವಾಗ ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿದಾರರ ಪರ ವಕೀಲರಿಗೆ ಕೌಂಟರ್ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನಾಳೆ ಮುಂದೂಡಿದರು.
ಡಿ.ಕೆ.ರವಿ ಅವರು ಮಹಿಳಾ ಐಎಎಸ್ ಅಧಿಕಾರಿಯೊಬ್ಬರಿಗೆ 44 ಬಾರಿ ದೂರವಾಣಿ ಕರೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಸಿಎಂ ಅದನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.