ಮನಮೋಹನ್ ಸಿಂಗ್ 
ಪ್ರಧಾನ ಸುದ್ದಿ

ಮಾಜಿ ಪ್ರಧಾನಿಗೆ ರಿಲೀಫ್: ಮನಮೋಹನ್ ಸಿಂಗ್ ಸಮನ್ಸ್‌ಗೆ ಸುಪ್ರೀಂ ತಡೆ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾರಿ ಮಾಡಿದ್ದ ಸಮನ್ಸ್‌ಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾರಿ ಮಾಡಿದ್ದ ಸಮನ್ಸ್‌ಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.

ತಮ್ಮ ವಿರುದ್ಧದ ಸಮನ್ಸ್‌ ರದ್ದು ಮಾಡುವಂತೆ ಕೋರಿ ಸಿಂಗ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿಂಗ್ ಸೇರಿದಂತೆ ಇತರೆ ಐವರಿಗೆ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದೆ. ಅಲ್ಲದೆ ಈ ಸಂಬಂಧ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಉದ್ಯಮಿ ಕುಮಾರ ಮಂಗಲಂ, ಪಿ.ಸಿ.ಪಾರಕ್ ಸೇರಿ 6 ಜನರಿಗೆ ಹಾಗೂ ಹಿಂಡಾಲ್ಕೋ ಸಂಸ್ಥೆಗೆ ಸೇರಿದ 8 ಕಂಪನಿಗಳಿಗೆ ಮಾ.11 ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಅಲ್ಲದೆ, ಮನಮೋಹನ್ ಸಿಂಗ್ ಅವರನ್ನು ಹಲವು ಬಾರಿ ವಿಚಾರಣೆಗೊಳಪಡಿಸಿತ್ತು.

ಸಿಬಿಐ ಜಾರಿ ಮಾಡಿದ ಸಮನ್ಸ್ ಕುರಿತಂತೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು, ಸಿಬಿಐ ಜಾರಿ ಮಾಡಿರುವ ಸಮನ್ಸ್ ಕಾನೂನು ಬದ್ಧವಾಗಿಲ್ಲ. ಸಿಬಿಐ ಅಧಿಕಾರಿಗಳು ಕಾನೂನು ರೀತಿಯ ನಿಯಮಗಳನ್ನು ಪಾಲಿಸಿಲ್ಲ. ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಅಪರಾಧ ವಿಭಾಗದಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಮನ್ಸ್ ಜಾರಿ ಮಾಡಿರುವ ಸಿಬಿಐ ಕ್ರಮ ಸರಿಯಲ್ಲ. ಸಿಬಿಐ ಅವರು ಜಾರಿ ಮಾಡಿರುವ ಸಮನ್ಸ್ ನ್ನು ರದ್ದು ಮಾಡುವಂತೆ ಕೋರಿ ಮನಮೋಹನ್ ಸಿಂಗ್ ಅವರು  ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್