ಟ್ವಿಟ್ಟರ್ ಖಾತೆ ತೆರೆದ ರಾಹುಲ್ ಗಾಂಧಿ 
ಪ್ರಧಾನ ಸುದ್ದಿ

ಅಧಿಕೃತವಾಗಿ ಟ್ವಿಟ್ಟರ್ ಖಾತೆ ತೆರೆದ ರಾಹುಲ್ ಗಾಂಧಿ

ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲದಿದರಿಂದ ಬಂದಿದ್ದ ಟೀಕೆಗಳಿಗೆ ಉತ್ತರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಧಿಕೃತ ಟ್ವಿಟ್ಟರ್ ಖಾತೆಯನ್ನು

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲದಿದರಿಂದ ಬಂದಿದ್ದ ಟೀಕೆಗಳಿಗೆ ಉತ್ತರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಮಂಗಳವಾರ ತೆರೆದಿದ್ದಾರೆ. ಟಿಟ್ಟರ್ ಹ್ಯಾಂಡಲ್ '@officeofRG' ಎಂದಿದೆ.

ಈ ಟ್ವಿಟ್ಟರ್ ಹ್ಯಾಂಡಲ್ ಅನ್ನು ಅವರ ಕಚೇರಿ ನಿರ್ವಹಿಸಲಿದ್ದು, ಅವರ ಕಾರ್ಯಕ್ರಮಗಳು ಮತ್ತಿತರ ಅಧಿಕೃತ ವಿಷಯಗಳನ್ನು ಬಿತ್ತರಿಸಲಿದೆ.

ಖಾತೆ ತೆರೆದ ಎರಡು ದಿನಗಳಲ್ಲಿ ಅಂದರೆ ಗುರುವಾರದ ಮಧ್ಯಾಹ್ನದ ಹೊತ್ತಿಗೆ ೨೨೦೦೦ ಜನ ರಾಹುಲ್ ಗಾಂಧಿ ಅವರನ್ನು ಟ್ವಿಟ್ಟರ್ ನಲ್ಲಿ ಅನುಸರಿಸುತ್ತಿದ್ದಾರೆ. "ರಾಹುಲ್ ಗಾಂಧಿ ಅವರ ಅಧಿಕೃತ ಕಾರ್ಯಕ್ರಮಗಳಿಗಾಗಿ ಈ ಜಾಗ ನೋಡುತ್ತಿರಿ" ಎಂದು ರಾಹುಲ್ ಮೊದಲ ಟ್ವೀಟ್ ಮಾಡಿದ್ದಾರೆ.

ಇದೂ ಅಲ್ಲದೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯಲ್ಲಿ ಐದು ಗ್ರಾಮಗಳಲ್ಲಿ ನಡೆಸುವ ಪಾದಯಾತ್ರೆ ಕಾರ್ಯಕ್ರಮವನ್ನು ಕೂಡ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!