ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

10 ವರ್ಷಗಳ ಯುಪಿಎ ಆಡಳಿತಕ್ಕಿಂತ, ಎನ್ ಡಿಎ 10 ತಿಂಗಳ ಆಡಳಿತ ಉತ್ತಮ: ಮೋದಿ

ಯುಪಿಎ ಸರ್ಕಾರ 10 ವರ್ಷಗಳ ಆಡಳಿತಕ್ಕಿಂತ, 10 ತಿಂಗಳ ಎನ್ ಡಿಎ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ಉತ್ತಮ ಎಂದು ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಯುಪಿಎ ಸರ್ಕಾರ 10 ವರ್ಷಗಳ ಆಡಳಿತಕ್ಕಿಂತ, 10 ತಿಂಗಳ ಎನ್ ಡಿಎ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ಉತ್ತಮ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಯುಪಿಎ ಸರ್ಕಾರ 10 ವರ್ಷಗಳಲ್ಲಿ ಮಾಡಿದ ಕಾರ್ಯಕ್ಕಿಂತ, ಬಿಜೆಪಿ ಅಧಿಕಾರಕ್ಕೆ ಬಂದ ಹತ್ತೇ ತಿಂಗಳಲ್ಲಿ ಮಾಡಿರುವ ಕೆಲಸ ಉತ್ತಮವಾಗಿದೆ ಎಂದು ಹೇಳುವ ಮೂಲಕ ಮೋದಿ ಯುಪಿಎ ಆಡಳಿತದ ಬಗ್ಗೆ ಟೀಕಿಸಿದ್ದಾರೆ.

ಎನ್ ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಪಕ್ಷದ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಯುಪಿಎ ಅಧಿಕಾರದಲ್ಲಿದ್ದಾಗ ದೇಶಕ್ಕಾಗಿ ಏನೂ ಮಾಡಿಲ್ಲ. ಅಲ್ಲದೇ, ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಾ, ಕೊಳ್ಳೆ ಹೊಡೆಯುತ್ತಿತ್ತು.

ಕೇವಲ 10 ತಿಂಗಳಲ್ಲಿ ಎನ್ ಡಿಎ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಕಪ್ಪು ಹಣ ವಾಪಸ್ಸು ತರಲು ಬಿಜೆಪಿ ಸಾಕಷ್ಟು ಪ್ರಯತ್ನಿಸುತ್ತಿದೆ. ಈ ಸಂಬಂಧ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ನೆರೆ ಹೊರೆ ದೇಶಗಳಿಂದ ಬಾಂದವ್ಯ ವೃದ್ಧಿಮಾಡಿಕೊಂಡಿದೆ. ಎನ್ ಡಿಎ ಅಧಿಕಾರಕ್ಕೆ ಬಂದ ಮೇಲೆ ನೆರೆ ದೇಶಗಳು ಬೆಂಬಲ ನೀಡಿವೆ ಎಂದು ಹೇಳಿದ್ದಾರೆ.

ಆದರೆ, ಯುಪಿಎ ಸರ್ಕಾರ ಇದರಲ್ಲಿ ವಿಫಲವಾಗಿದೆ. ಕೇವಲ ಸಮಯ ವ್ಯರ್ಥ ಮಾಡಿದೆ ಹೊರತು, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ: ವಿಂಡೀಸ್ ವಿರುದ್ಧ ಗೆಲುವು; T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್