ಬೆಂಗಳೂರು: ಮೇ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ.
ಈ ಮುಂಚೆ ಇಲಾಖೆಯ ಅಧಿಕಾರಿ ಮೇ 17ರಂದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದ್ದರು. ಅಲ್ಲದೆ ಮೇ 16 ಅಥವಾ 17ಕ್ಕೆ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಹೇಳಿದ್ದರು. ಹೀಗಾಗಿ ಫಲಿತಾಂಶ ಪ್ರಕಟ ಮಾಡುವ ದಿನಾಂಕದ ಬಗ್ಗೆ ಹಲವು ಗೊಂದಲಗಳು ಮೂಡಿದ್ದವು. ಇದೀಗ ಆ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಸ್ಪಷ್ಟಪಡಿಸಿದೆ.
ಈ ಸಂಬಂಧ ಶುಕ್ರವಾರ ನಡೆದ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಸೋಮವಾರ ಬೆಳಗ್ಗೆ 11.30ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ.