ಜಯಲಲಿತಾ 
ಪ್ರಧಾನ ಸುದ್ದಿ

23ಕ್ಕೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಾ ಪ್ರಮಾಣ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಮೇ 23ಕ್ಕೆ ಮತ್ತೆ ತಮಿಳುನಾಡು....

ಚೆನ್ನೈ:  ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಮೇ 23ಕ್ಕೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೇ 22ರಂದು ಮುಖ್ಯಮಂತ್ರಿ ಓ ಪನ್ನೀರ್ ಸೇಲ್ವಂ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್.ಸಾರಸ್ವತಿ ಅವರು ಹೇಳಿರುವುದಾಗಿ ಮಾಧ್ಯಮಗಳು ಬುಧವಾರ ವರದಿ ಮಾಡಿವೆ.

22ರಂದು ಬೆಳಗ್ಗೆ 7ಗಂಟೆಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಜಯಲಲಿತಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗುತ್ತದೆ. ಬಳಿಕ ಓ ಪನ್ನೀರ್ ಸೇಲ್ವಂ ಅವರು ರಾಜ್ಯಪಾಲ ಕೆ.ರೋಶಯ್ಯ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ. ಅಲ್ಲದೆ
ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಜಯಲಲಿತಾ ಅವರನ್ನು ಆಯ್ಕೆ ಮಾಡಿರುವ ಮಾಹಿತಿಯನ್ನು ಪನ್ನೀರ್ ಸೇಲ್ವಂ ಅವರು ರಾಜ್ಯಪಾಲರಿಗೆ ತಿಳಿಸಲಿದ್ದಾರೆ. ನಂತರ ರಾಜ್ಯಪಾಲರು ಜಯಲಲಿತಾ ಅವರಿಗೆ ನೂತನ ಸರ್ಕಾರ ರಚನೆಗೆ ಆಹ್ವಾನ ನೀಡಲಿದ್ದಾರೆ.

ಕಳೆದ ಸೆಪ್ಟೆಂಬರ್ 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ದೋಷಿ ಎಂದು ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಮೇ 11ರಂದು ಕರ್ನಾಟಕ ಹೈಕೋರ್ಟ್ ಸೆಷೆನ್ಸ್ ಕೋರ್ಟ್ ತೀರ್ಪು ರದ್ದುಗೊಳಿಸಿ, ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಜಯಾ ಮತ್ತೆ ಸಿಎಂ ಆಗುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)