ಅಫ್ಘಾನಿಸ್ಥಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ; ಜಿಲ್ಲಾ ಪ್ರಾಂತಾಧಿಪತಿ ಸಾವು
ಅಫ್ಘಾನಿಸ್ಥಾನ ಉರುಜ್ಗನ್ ಪ್ರಾಂತ್ಯದಲ್ಲಿ ಶನಿವಾರ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ ಜಿಲ್ಲ ಗವರ್ನರ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು
ಕಾಬುಲ್: ಅಫ್ಘಾನಿಸ್ಥಾನ ಉರುಜ್ಗನ್ ಪ್ರಾಂತ್ಯದಲ್ಲಿ ಶನಿವಾರ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ ಜಿಲ್ಲ ಗವರ್ನರ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಚರ್ಚಿನೋ ಜಿಲ್ಲೆಯ ಪ್ರಾಂತಾಧಿಪತಿ ಮೊಹಮ್ಮದ್ ಇಸ್ಮಾಯಿಲ್ ಹಕ್ಯಾರ್ ಅವರು ಶನಿವಾರ ಬೆಳಗ್ಗೆ ಕಚೇರಿಗೆ ತೆರಳುವಾಗ ಷಾ ಮಶಾದ್ ಪ್ರದೇಶದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ" ಎಂದು ಅವರು ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಚರ್ಚಿನೋ ಜಿಲ್ಲೆಯ ಪ್ರಾಂತಾಧಿಪತಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಕ್ಯಾರ್ ಅವರನ್ನು ಪ್ರಮುಖ ತಾಲಿಬಾನ್ ವಿರೋಧಿ ಎಂದು ಪರಿಗಣಿಸಲಾಗಿತ್ತು ಹಾಗೂ ಭದ್ರತಾ ಪಡೆಗಳ ಜೊತೆ ತಾಲಿಬಾನ್ ವಿರುದ್ಧ ಯುದ್ಧ ಮಾಡಿದ್ದರು ಎನ್ನಲಾಗಿದೆ.
ಈ ಘಟನೆಯ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.