ಪ್ರಧಾನ ಸುದ್ದಿ

ಪಿಯುಸಿ ಫಲಿತಾಂಶ ಗೊಂದಲ: ಕಿಮ್ಮನೆ ರಾಜಿನಾಮೆಗೆ ಬಿಜೆಪಿ ಆಗ್ರಹ

Mainashree

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶದಲ್ಲಿನ ಗೊಂದಲಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರೇ ನೇರ ಹೊಣೆಯಾಗಿದ್ದು, ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿದೆ.

ಪಿಯುಸಿ ಫಲಿತಾಂಶ ಗೊಂದಲ ವಿರೋಧಿಸಿ ಶನಿವಾರ ಪದವಿ ಪೂರ್ವ ಶಿಕ್ಷಣ ಮಂಡಳಿ ಎದುರು ಬಿಜೆಪಿ ಯುವ ಮೋರ್ಚ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಸಚಿವ ಕಿಮ್ಮನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಕಿಮ್ಮನೆ ರಾಜಿನಾಮೆಗೆ ಆಗ್ರಹಿಸಿದ್ದಾರೆ. ಬಿಜೆಪಿ ಮೋರ್ಚಾ ಬೆಂಗಳೂರು ಘಟಕದ ಅಧ್ಯಕ್ಷ ಸಪ್ತಗಿರಿಗೌಡ ಮಾತನಾಡಿ, ಫಲಿತಾಂಶ ಪ್ರಕಟಣೆ ಮೊದಲೇ ಅಧಿಕಾರಿಗಳು ಎಚ್ಚೆತ್ತಿದ್ದರೆ, ಈ ರೀತಿ ಗೊಂದಲುಗಳು ಉಂಟಾಗುತ್ತಿರಲಿಲ್ಲ. ಕೃಪಾಂಕವು ಸರಿಯಾಗಿ ನೀಡಿಲ್ಲ. ಅಧಿಕಾರಿಗಳ ಬೇಜಾವಬ್ದಾರಿಂದ ವಿದ್ಯಾರ್ಥಿಗಳ ನರಳುವಂತಾಗಿದೆ. ಪಿಯುಸಿ ಫಲಿತಾಂಶವನ್ನು ಕಿಮ್ಮನೆ, ಅಧಿಕಾರಿಗಳು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಷಮಾ ಗೋಡ್ ಬೋಲೆ ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವುದರ ಬದಲು ಸರ್ಕಾರ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಕ್ರಮಕ್ಕೆ ಮುಂದಾಗಿದೆ. ಸರ್ಕಾರದ ಈ ಧೋರಣೆ ಸರಿಯಲ್ಲ. ಸಿದ್ದರಾಮ್ಯಯ್ಯ ಕೂಡಲೇ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಶ್ನೆ ಪತ್ರಿಕೆ ತಯಾರಿಸುವ ಪ್ರಕ್ರಿಯೆಯಿಂದ ಪ್ರಾರಂಭಿಸಿ ಗ್ರೇಸ್ ಮಾರ್ಕ್ಸ್ ನೀಡುವಲ್ಲಿಯವರೆಗಿನ ಗೊಂದಲಕ್ಕೆ ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರೇ ನೇರೆ ಹೊಣೆ. ಈ ಹಿನ್ನಲೆಯಲ್ಲಿ ಸುಷಮಾ ಅವರನ್ನು ಅಮಾನತುಗೊಳಿಸಬೇಕು. ಉತ್ತರ ಪತ್ರಿಕೆಗಳ ಪೋಟೋ ಕಾಫಿ, ಮರುಮೌಲ್ಯಮಾಪನ, ಅಂಕಗಳ ಮರು ಎಣಿಕೆ ಉಚಿತವಾಗಿ ನಡೆಸಬೇಕು. ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ತೆಗೆದುಕೊಳ್ಳಬಾರದು. ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

SCROLL FOR NEXT