ಬೆಂಗಳೂರು: ಒಂದಂಕಿ ಲಾಟರಿ ಹಗರಣವನ್ನು ಸಿಬಿಐಗೆ ಒಪ್ಪಿಸಿವಂತೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸದಾನಂದಗೌಡ ಅವರು, ಹಗರಣದ ಹಿಂದೆ ರಾಜಕಾರಣಿಗಳ ಕೈವಾಡವಿದ್ದು, ಇಂತಹ ಹೈಫ್ರೋಫೈಲ್ ಹಗರಣವನ್ನು ಸಿಐಡಿ ಮೂಲಕ ತನಿಖೆ ನಡೆಸುವ ಬದಲು ಸಿಬಿಐಗೆ ಒಪ್ಪಿಸಿ ವಿಸ್ಕೃತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಹಗರಣಕ್ಕೆ ಸಂಬಂಧಿಸಿ ಆರೋಪ ಕೇಳಿ ಬಂದಿರುವ ನಮ್ಮ ಪಕ್ಷದಲ್ಲಿರುವ ಶಂಕರ್ ಬಿದರಿ ಸೇರಿದಂತೆ ಯಾರನ್ನೂ ರಕ್ಷಿಸುವ ಕೆಲಸ ನಾವು ಮಾಡುವುದಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ಹಗರಣದಲ್ಲಿ ಯಾರೆ ಶಾಮೀಲಾಗಿರಲಿ ಅವರ ವಿರುದ್ದ ನಿರ್ಧಾಕ್ಷಿಣ ಕ್ರಮ ಕೈಗೊಳ್ಳಬೇಕು ಎಂದರು.
ಅಕ್ರಮ ಲಾಟರಿ ದಂಧೆಯ ರೂವಾರಿ ಪಾರಿ ರಾಜನ್ ಜತೆ ನಿಕಟ ಸಂಪರ್ಕ ಹೊಂದಿರುವುದು ಕಂಡು ಬಂದ ಕಾರಣ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮತ್ತು ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಎಸ್ಪಿ ಧರಣೇಶ್ ಅವರನ್ನು ಅಮಾನತು ಮಾಡಲಾಗಿದೆ.