ಪ್ರಧಾನ ಸುದ್ದಿ

ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದ ಅಲೋಕ್ ಕುಮಾರ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಬಹುಕೋಟಿ ಒಂದಂಕಿ ಲಾಟರಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಅಮಾನತುಗೊಂಡಿರುವ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಹಗರಣದ ಕಿಂಗ್‌ಪಿನ್ ಪಾರಿರಾಜನ್ ಜತೆ ಸೇರಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು ಎಂದು ಸಿಐಡಿ ಉನ್ನತ ಮೂಲಗಳು ತಿಳಿಸಿವೆ.

ಅಲೋಕ್ ಕುಮಾರ್ ಅವರು ಲಾಟರಿ ದಂಧೆಗಿಂತ ರಿಯಲ್ ಎಸ್ಟೇಟ್ ದಂಧೆಯ ನಂಟು ಹೊಂದಿದ್ದರು ಎನ್ನಲಾಗಿದೆ.

ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ
ಅಧಿಕಾರಿಗಳು ಕಳೆದ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದರು. ವರದಿಯನ್ನು ಆಧರಿಸಿ ಅಲೋಕ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು.

SCROLL FOR NEXT