ನವದೆಹಲಿ: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಆರೋಪಿಗಳಾದ ಲೋಕಾಯುಕ್ತ ಮಾಜಿ ಪಿಆರ್ಒ ಸೈಯದ್ ರಿಯಾಜ್, ಅಶೋಕ್ ಕುಮಾರ್, ಶಂಕರೇಗೌಡ ಹಾಗೂ ಶ್ರೀನಿವಾಸ್ ಗೌಡ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ತಡೆಯಾಜ್ಞೆ ತೆರವು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ, ಹಿಂದಿನ ಆದೇಶವನ್ನು ಮಾರ್ಪಡಿಸುವುದಿಲ್ಲ ಎಂದು ಹೇಳಿ, ತಡೆಯಾಜ್ಞೆಯನ್ನು ಮುಂದುವರೆಸಿದೆ. ಅಲ್ಲದೆ ಇದೊಂದು ವಿಚಿತ್ರ ಪ್ರಕರಣ ಎಂದು ಮುಖ್ಯ ನ್ಯಾ.ದತ್ತು ಅಭಿಪ್ರಾಯಪಟ್ಟಿದ್ದಾರೆ.