ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟ 190ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿಕೂಟ ಕ್ಲೀನ್ ಸ್ವೀಪ್ ಮಾಡಲಿದೆ ಎಂಬ ವರದಿಗಳಿವೆ. ಬಿಜೆಪಿ ಸಂಪೂರ್ಣ ನೆಲಕಚ್ಚಲಿದೆ. ನಾವು 190ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದುಕೊಂಡಿದ್ದೇನೆ' ಎಂದು ಲಾಲು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಅಲ್ಲದೆ ಬಿಹಾರ ಜನತೆ ಬಿಜೆಪಿ ಮತ ನೀಡಿಲ್ಲ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.
ಐದು ಹಂತಗಳ ಬಿಹಾರ ವಿಧಾನಸಭೆ ಚುನಾವಣೆ ಇಂದು ಮುಕ್ತಾಯಗೊಂಡಿದ್ದು, ಇಂದು ನಡೆದ ಕೊನೆಯ ಹಂತದ ಮತದಾನದಲ್ಲಿ ಶೇ.59.46ರಷ್ಟು ಮತದಾನವಾಗಿದೆ. ನವೆಂಬರ್ 8ಕ್ಕೆ ಮಹಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.