ಪ್ರಧಾನ ಸುದ್ದಿ

ಬಿಹಾರದ ಪ್ರತಿಷ್ಠೆಯ ಗೆಲುವಿದು: ನಿತೀಶ್ ಕುಮಾರ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ತಮ್ಮ ಮೈತ್ರೀಕೂಟದ ಗೆಲುವು ಬಿಹಾರಿಗಳ ಪ್ರತಿಷ್ಠೆಯ ಗೆಲುವಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ...

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ತಮ್ಮ ಮೈತ್ರೀಕೂಟದ ಗೆಲುವು ಬಿಹಾರಿಗಳ ಪ್ರತಿಷ್ಠೆಯ ಗೆಲುವಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶದಲ್ಲಿ ಜೆಡಿಯು, ಆರ್ ಜೆಡಿ ನೇತೃತ್ವ ಮಹಾಘಟ್ ಬಂಧನ ಮೈತ್ರೀಕೂಟ ಅಭೂತ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ  ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಪ್ರಸ್ತುತ ಚುನಾವಣೆ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ವಿರೋಧ ಪಕ್ಷದ ಅವಶ್ಯಕತೆ ಇದೆ ಎಂಬುದನ್ನು ಬಿಹಾರದ ಜನತೆ ತೋರಿಸಿಕೊಟ್ಟಿದ್ದಾರೆ. ಬಿಜೆಪಿ  ಪಕ್ಷದ ಒಡೆದು ಆಳುವ ನೀತಿಯನ್ನು ಜನತೆ ತಿರಸ್ಕರಿಸಿದ್ದು, ಬಿಹಾರದ ಎಲ್ಲ ವಿಭಾಗದ ಜನರು ನಮಗೆ ಮತ ನೀಡಿದ್ದಾರೆ. ಬಿಹಾರದ ಪ್ರತಿಷ್ಠೆಗೆ ಸಂದ ಜಯವಿದು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿದ ಅವರು, ಇದೊಂದು ಜನತಾ ಅಭಿಯಾನ ಮತ್ತು ಪ್ರಧಾನಿ ಮೋದಿ ವಿರುದ್ಧದ ಅಭಿಯಾನವಾಗಿದೆ. ಇದನ್ನು ನಾವು  ಇಲ್ಲಿಗೇ ಬಿಡಡೇ ದೇಶವ್ಯಾಪಿ ವ್ಯಾಪಿಸುವಂತೆ ನೋಡಿಕೊಳ್ಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿ ರಾಷ್ಟ್ರೀಯ ಮುಖಂಡರೆಲ್ಲರೂ ನಮ್ಮ ಗೆಲುವಿಗೆ ಶುಭಾಶಯ ಕೋರಿದ್ದಾರೆ. ಬಿಹಾರ  ಚುನಾವಣಾ ಫಲಿತಾಂಶವನ್ನು ನಾವು ಸಕಾರಾತ್ಮಕವಾಗಿ ನೋಡುತ್ತಿದ್ದು, ರಾಜ್ಯದ ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ನಮಗೆ ನೆರವಾಗುತ್ತದೆ ಎಂದು ಭಾವಿಸಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT