ಬೆಂಗಳೂರು: ಟಿಪ್ಪು ಸುಲ್ತಾನ್ ಅವರ ಜನ್ಮ ದಿನಾಚರಣೆಗೆ ಹಲವು ವಿರೋಧಗಳು ವ್ಯಕ್ತವಾಗಿದ್ದು, ಮಡಿಕೇರಿ ಹಾಗೂ ಕೊಡಗಿನಲ್ಲಿ ಮಂಗಳವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಟಿಪ್ಪು ಜಯಂತಿ ಆಚರಣೆ ಕುರಿತಂತೆ ಈಗಾಗಲೇ ಮಡಿಕೇರಿ ಹಾಗೂ ಕೊಡಗಿನಲ್ಲಿ ಹಲವು ಪ್ರತಿಭಟನೆಗಳು ನಡೆಯುತ್ತಿದ್ದು, ಈಗಾಗಲೇ ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಉದ್ವಿಗ್ನ ವಾತಾವರಣ ಹಿನ್ನೆಲೆಯಲ್ಲಿ ಈಗಾಗಲೇ ಅಧಿಕಾರಿಗಳಿ ಆದೇಶ ನೀಡಿರುವ ಗೃಹ ಸಚಿವ ಪರಮೇಶ್ವರ ಅವರು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ಮಡಿಕೇರಿಗೆ ಹೋಗುವಂತೆ ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.