ಮುಖ್ಯಮಂತ್ರಿ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಟಿಪ್ಪು ಮತಾಂಧನೂ ಅಲ್ಲ, ಹಿಂದೂ ವಿರೋಧಿಯೂ ಅಲ್ಲ : ಸಿದ್ದರಾಮಯ್ಯ

ಟಿಪ್ಪು ಒಬ್ಬ ಅಪ್ಪಟ ದೇಶಪ್ರೇಮಿ. ಮತಾಂಧ ಅಲ್ಲ, ಹಿಂದೂ ವಿರೋಧಿಯೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ...

ಬೆಂಗಳೂರು: ಟಿಪ್ಪು ಒಬ್ಬ ಅಪ್ಪಟ ದೇಶಪ್ರೇಮಿ. ಮತಾಂಧ ಅಲ್ಲ, ಹಿಂದೂ ವಿರೋಧಿಯೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಉದ್ದೇಶಕ್ಕಾಗಿ ಟಿಪ್ಪು ಜಯಂತಿಯನ್ನು ಆಚರಿಸುತ್ತಿಲ್ಲ. ಜನರ ನಡುವೆ ದ್ವೇಷವನ್ನು ಹುಟ್ಟುಹಾಕುವುದು ಸರ್ಕಾರದ ಉದ್ದೇಶವಲ್ಲ, ಆ ಕ್ರಮವೂ ಸರಿಯಲ್ಲ. ಜನತೆ ದೀಪಾವಳಿಯ ಈ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಬೇಕು ಎಂದು  ಮನವಿ ಮಾಡಿದರು.

ರಾಜಕೀಯ ಕಾರಣಕ್ಕಾಗಿ ಕೋಮುವಾದಿಗಳು ಟಿಪ್ಪು ಜಯಂತಿ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ.  ಆತ ಹಿಂದೂ ವಿರೋಧಿಯಾಗಿದ್ದ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ಅದೆಲ್ಲ ಸತ್ಯಕ್ಕೆ ದೂರವಾದ ವಿಚಾರ. ಕೋಮುವಾದಿಗಳು ಜನರ ನಡುವೆ ದ್ವೇಷ ಹುಟ್ಟುಹಾಕಿ ಶಾಂತಿ ಕದಡಬೇಡಿ ಎಂದು ಅವರು ಮನವಿ ಮಾಡಿಕೊಂಡರು.

ಸರ್ಕಾರ ಜಯಂತಿ ಮಾಡುವಾಗ ಶಾಂತಿ ಉಲ್ಲಂಘನೆ ಮಾಡುವುದು, ಕೋಮು ಸೌಹಾರ್ದತೆಯನ್ನು ಕದಡುವುದು ಕೋಮುವಾದಿಗಳು. ಕೊಡಗಿನಲ್ಲಿ ಪರಿಸ್ಥಿತಿ ಈಗ ನಿಯಂತ್ರಣಕ್ಕೆ ಬಂದಿದೆ. ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಕಾನೂನು, ಸುವ್ಯವಸ್ಥೆ ಕಾಪಾಡುವಂತೆ ಅವರು ಹೇಳಿದರು.

ಮಡಿಕೇರಿಯಲ್ಲಿ  ವಿಎಚ್ ಪಿ ನಾಯಕ ಸಾವಿಗೀಡಾಗಿರುವುದು ಲಾಠಿ ಚಾರ್ಜ್ ನಿಂದಲ್ಲ, ಅಥವಾ ಗುಂಡಿನ ದಾಳಿಯಿಂದಲ್ಲ. ಓಡಿ ಹೋಗುವಾಗ ಕೆಳಗೆ ಬಿದ್ದು ಸಾವಿಗೀಡಾಗಿದ್ದು. ಆದರೆ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಬಂದ್ ಆಚರಣೆ ಮಾಡುವ ಅಗತ್ಯವೇನಿತ್ತು? ಎಂದು ಅವರು ಪ್ರಶ್ನಿಸಿದರು.

ಇದು ಕೋಮು ಭಾವನೆಯನ್ನು ಸೂಚಿಸುತ್ತದೆ. ಶಾಂತಿ, ಸೌಹಾರ್ದತೆ ಕಾಪಾಡುವ ಬದಲಾಗಿ ಬಂದ್ ಆಚರಿಸಿ ಗಲಾಟೆ ಎಬ್ಬಿಸಿರುವ ಕ್ರಮ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!