ಟಿಪ್ಪು ಜಯಂತಿ ಘರ್ಷಣೆ: ಮುಂದುವರಿದ ಕೊಡಗು ಬಂದ್ 
ಪ್ರಧಾನ ಸುದ್ದಿ

ಟಿಪ್ಪು ಜಯಂತಿ ಘರ್ಷಣೆ: ಮುಂದುವರಿದ ಕೊಡಗು ಬಂದ್

ರಾಜ್ಯ ಸರ್ಕಾರದ ಟಿಪ್ಪು ಜಯಂತಿ ಆಚರಣೆ ಕುರಿತಂತೆ ನಡೆಯುತ್ತಿರುವ ಪರ-ವಿರೋಧದ ಚರ್ಚೆಗಳು ಮುಂದುವರೆದಿದ್ದು, ಕೊಡಗೂ ಬಂದ್ ಆಚರಣೆ ಬುಧವಾರ ಕೂಡ ಮುಂದುವರಿದಿದೆ...

ಮಡಿಕೇರಿ: ರಾಜ್ಯ ಸರ್ಕಾರದ ಟಿಪ್ಪು ಜಯಂತಿ ಆಚರಣೆ ಕುರಿತಂತೆ ನಡೆಯುತ್ತಿರುವ ಪರ-ವಿರೋಧದ ಚರ್ಚೆಗಳು ಮುಂದುವರೆದಿದ್ದು, ಕೊಡಗೂ ಬಂದ್ ಆಚರಣೆ ಬುಧವಾರ ಕೂಡ ಮುಂದುವರಿದಿದೆ.

ಟಿಪ್ಪು ಜಯಂತಿ ಆಚರಣೆ ರಾಜ್ಯದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದು, ಪರ-ವಿರೋಧದ ಘರ್ಷಣೆಗಳು ಹಲವೆಡೆ ನಡೆಯುತ್ತಿದ್ದು, ಇಂದೂ ಸಹ ಕೊಡಿಗಿನಾದ್ಯಂತ ಬಂದ್ ಆಚರಣೆ ಮುಂದುವರೆದಿದೆ. ಇದೀಗ ನಗರದಾದ್ಯಂತ ಬಿಗಿ ಬಂದೋಬಸ್ತ್ ನ್ನು ನಿಯೋಜಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ರಾಜ್ಯ ಸರ್ಕಾರ ಆಚರಿಸಲು ನಿರ್ಧರಿಸಿದ್ದ ಟಿಪ್ಪು ಜಯಂತಿಯನ್ನು ವಿರೋಧಿಸಿ ಬಿಜೆಪಿ ಸೇರಿದಂತೆ ಹಲವು ಹಿಂದೂ ಪರ ಸಂಘಟನೆಗಳು ನಿನ್ನೆ ಕೊಡಗು ಬಂದ್ ಗೆ ಕರೆ ನೀಡಿದ್ದವು. ಇದರಂತೆ ನಿನ್ನೆ ಮಡಿಕೇರಿಯ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದ್ದವು. ಪ್ರತಿಭಟನೆ ವೇಳೆ ಘರ್ಷಣೆಗಳು ನಡೆದಿದ್ದವು. ಘರ್ಷಣೆಯಲ್ಲಿ ನಡೆದ ಕಲ್ಲುತೂರಾಟದಲ್ಲಿ ವಿಹೆಚ್ ಪಿ ಮುಖಂಡ ಕುಟ್ಟಪ್ಪ ಎಂಬುವವರು ಸಾವನ್ನಪ್ಪಿದ್ದರು. ಇದಲ್ಲದೆ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜು ಎಂಬ ವ್ಯಕ್ತಿ ಪ್ರತಿಭಟನೆ ನೋಡಲೆಂದು ಬಂದ ವೇಳೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾದರೆ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ