ಗಿರೀಶ್ ಕಾರ್ನಾಡ್ 
ಪ್ರಧಾನ ಸುದ್ದಿ

ಗಿರೀಶ್ ಕಾರ್ನಾಡ್ ವಿರುದ್ಧ ದೂರು ದಾಖಲು

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು...

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಿರೀಶ್‌ಕಾರ್ನಾಡ್ ಅವರು ಕೆಂಪೇಗೌಡರು ಸ್ವಾತಂತ್ರ್ಯ ಸೇನಾನಿ ಅಲ್ಲ, ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಹೇಳಿಕೆ ನೀಡಿದ್ದರು. 
ಇದೊಂದು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆಯಾಗಿದ್ದು, ರಾಜ್ಯದಲ್ಲಿ ಶಾಂತಿ ಕದಡುವಂತೆ ಮಾಡಲಾಗಿದೆ. ಹಾಗಾಗಿ, ಕಾರ್ನಾಡ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಹೋರಾಟಗಾರ ಚೀನಾ ರಾಮು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗಿರೀಶ್ ಕಾರ್ನಾಡ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಕೂಡಲೇ ಅವರನ್ನು ಪೊಲೀಸರು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ರಾಜ್ಯಾದ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಾರ್ನಾಡ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿವೆ. 
ಕಾರ್ನಾಡ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದು, ಕೇವಲ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಇದರಿಂದ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ತಿಳಿಸಿದ್ದರು. 
ಟಿಪ್ಪು ಸುಲ್ತಾನ್ ಅವರ 265ನೇ ಜಯಂತಿ ಅಂಗವಾಗಿ ವಿಧಾನಸೌಧದಲ್ಲಿ ಸರ್ಕಾರ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಗಿರೀಶ್‌ ಕಾರ್ನಾಡ್ ಅವರು, ಕೆಂಪೇಗೌಡರು ಸ್ವಾತಂತ್ರ್ಯ ಸೇನಾನಿ ಅಲ್ಲ ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಹೇಳಿಕೆ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್